ನವದೆಹಲಿ: ಇಸ್ರೋ ಕೇಂದ್ರದ ಚಂದ್ರಯಾನ-2 ಮತ್ತು ಚಂದ್ರಯಾನ-3 ಕಾರ್ಯಾಚರಣೆಯಲ್ಲಿ ಚಂದ್ರಯಾನಗಳ ಲ್ಯಾಂಡಿಂಗ್ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹೆಸರುಗಳನ್ನು ಘೋಷಿಸಿದ ನಂತರ ಬಿಜೆಪಿ ಹಾಗೂ ಬಿಜೆಪಿ ಪರ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.
ದೇಶದ ಅತಿ ಹಳೆಯ ಮತ್ತು ದೊಡ್ಡ ಪಕ್ಷವೆನಿಸಿಕೊಂಡಿರುವ ಕಾಂಗ್ರೆಸ್ ಜವಹರಲಾಲ್ ನೆಹರೂ ಕುಟುಂಬಕ್ಕೆ ಮೊದಲ ಮನ್ನಣೆ ನೀಡಿದರೆ ಬಿಜೆಪಿಯವರು ದೇಶಕ್ಕೆ ಮೊದಲ ಪ್ರಾಶಸ್ತ್ಯ ನೀಡುತ್ತಿದ್ದಾರೆ. ಅದಕ್ಕೆ ಪ್ರಧಾನಿ ಮೋದಿಯವರು ಇಂದು ಇಸ್ರೊದ ಚಂದ್ರಯಾನಕ್ಕೆ ಇಟ್ಟಿರುವ ಹೆಸರುಗಳು ಮತ್ತೊಮ್ಮೆ ಸಾಕ್ಷಿಯಾಗಿದೆ ಎಂದು ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ.
ಪ್ರಧಾನಿ ಮೋದಿ ಇಂದು ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿ ಇಸ್ರೋ ಕಚೇರಿಯಿಂದ 3 ಪ್ರಮುಖ ಘೋಷಣೆಗಳನ್ನು ಮಾಡಿದರು. ಚಂದ್ರಯಾನ-3 ಇಳಿದ ಸ್ಥಳವನ್ನು ಶಿವಶಕ್ತಿ ಎಂದು ಕರೆಯಲಾಗುವುದು, ಚಂದ್ರಯಾನ-2 ಪ್ರಭಾವದ ತಾಣವನ್ನು ‘ತಿರಂಗಾ’ ಎಂದು ಕರೆಯಲಾಗುವುದು ಮತ್ತು ಮೂರನೇ ಚಂದ್ರಯಾನದ ಯಶಸ್ವಿ ಲ್ಯಾಂಡಿಂಗ್ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಇನ್ನು ಮುಂದೆ ಆಚರಿಸಲಾಗುವುದು ಎಂದು ಘೋಷಿಸಿದರು.
ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಟ್ವೀಟ್ ಮಾಡಿ, ಭಾರತ ಮೊದಲು ವರ್ಸಸ್ ಫ್ಯಾಮಿಲಿ ಫಸ್ಟ್! ಚಂದ್ರನ ಮೇಲೆ ಪರಿಣಾಮ / ಲ್ಯಾಂಡಿಂಗ್ ಪಾಯಿಂಟ್ ಹೆಸರುಗಳು – 1. ಚಂದ್ರಯಾನ1: ಜವಾಹರ್ ಪಾಯಿಂಟ್ 2. ಚಂದ್ರಯಾನ2: ತಿರಂಗ ಪಾಯಿಂಟ್ 3. ಚಂದ್ರಯಾನ3: ಶಿವಶಕ್ತಿ ಪಾಯಿಂಟ್ ನಂತರ ಲ್ಯಾಂಡರ್ ನ್ನು ವಿಕ್ರಮ್ ಲ್ಯಾಂಡರ್ ಎಂದು ಕರೆಯಲಾಯಿತು. ವಿಕ್ರಮ್ ಸಾರಾಭಾಯ್, ಯುಪಿಎ ಆಗಿದ್ದರೆ ಎಂದಿಗೂ ಕಳುಹಿಸುತ್ತಿರಲಿಲ್ಲ ಒಂದು ವೇಳೆ ಸಾಧನೆ ಮಾಡಿದ್ದರೂ ಕೂಡ ಅದಕ್ಕೆ ಇಂದಿರಾ ಪಾಯಿಂಟ್ ಮತ್ತು ರಾಜೀವ್ ಪಾಯಿಂಟ್ ಎಂದು ಹೆಸರಿಸುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…