BREAKING NEWS

ಶಿವಮೊಗ್ಗದಲ್ಲಿ ಬಿಜೆಪಿಗೆ ಒಂದೂ ಮುಸ್ಲಿಂ ವೋಟ್ ಬೇಡ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ವೀರಶೈವ-ಲಿಂಗಾಯತ ಸಮಾಜದ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವೀರಶೈವ ಸಮುದಾಯದವರನ್ನ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಲಿ ಶಿವಮೊಗ್ಗ ಶಾಸಕ ಕೆ.ಎಸ್ ಈಶ್ವರಪ್ಪ ಬಿಜೆಪಿಗೆ ಶಿವಮೊಗ್ಗದಲ್ಲಿ ಮುಸ್ಲಿಂ ವೋಟ್ ಬೇಡ ಎಂದರು. ಹಾಗೂ ವೋಟ್ ಹಾಕೋದು ಬರೀ ರಸ್ತೆ, ಚರಂಡಿ, ದೀಪ, ಕುಡಿಯುವ ನೀರಿಗಲ್ಲ ಎಂದರು.

ಈಶ್ವರಪ್ಪ ಮಾತನಾಡಿ, ಅಭಿವೃದ್ಧಿ ವಿವರದ ಬಗ್ಗೆ ನಾನು ಮಾತನಾಡುವುದಿಲ್ಲ. ಅಭಿವೃದ್ಧಿ ನಾವು ಅನುಭವಿಸುತ್ತಿದ್ದೇವೆ. ಆದರೆ ನಾನು ನಿಮಗೆ ಎಚ್ಚರಸುತ್ತಿರುವುದು ಜಾತಿ ಹಾಗೂ ಉಪಜಾತಿಗಳನ್ನು ಇಟ್ಟುಕೊಂಡು ಬರುವ ವ್ಯಕ್ತಿಗಳ ಬಗ್ಗೆ ಮಾತ್ರ. ಯಾರೂ ಕೂಡ ನಮ್ಮನ್ನ ಒಡೆಯದಂತೆ ನೋಡಿಕೊಳ್ಳಬೇಕು. ಶಿವಮೊಗ್ಗದಲ್ಲಿ 50 ರಿಂದ 56,000 ಮುಸ್ಲಿಂ ವೋಟ್ ಗಳಿವೆ ಎಂದು ಹೇಳುತ್ತಾರೆ. ನಮಗೆ ಅವರ ಒಂದೂ ವೋಟ್ ಬೇಡ.! ಶಿವಮೊಗ್ಗದಲ್ಲಿ ಹರ್ಷ ಕೊಲೆ ಸಮಯದಲ್ಲಿ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿತ್ತು. ನಾನು ಎಸ್ ಪಿ ಜೊತೆ ಮಾತನಾಡುವಾಗ ಒಮ್ಮೆ ಲವ್ ಜಿಹಾದ್ ಬಗ್ಗೆ ಪ್ರಸ್ತಾಪಿಸಿದ್ದೆ. ಲವ್ ಜಿಹಾದ್ ಪ್ರಕರಣಗಳಲ್ಲಿ ಮಹಿಳೆಯರು ದೂರು ನೀಡಲು ಹಿಂಜರಿಯುತ್ತಾರೆ ಎಂದು ಹೇಳಿದರು.ಅಂತಹ ಎಷ್ಟೋ ಪ್ರಕರಣಗಳು ದಾಖಲಾಗದೆ ಉಳಿಯುತ್ತದೆ. ನಮ್ಮ ಹೆಣ್ಣು ಮಕ್ಕಳಿಗೆ ಆ ಮುಸ್ಲಿಮರು ತೊಂದರೆ ಕೊಟ್ಟರೆ ಕಾಂಗ್ರೆಸ್ ನಾಯಕರು ಬರೋದಿಲ್ಲ. ಅವರು ಗಟ್ಟಿಯಾಗಿ ನಿಲ್ಲೋದಿಲ್ಲ. ಇಲ್ಲಿ ನಾವು ಯೋಚನೆ ಮಾಡಬೇಕಾಗಿರೋದು ಬರೀ ರಸ್ತೆ, ಚರಂಡಿ ದೀಪ ಕುಡಿಯುವ ನೀರಿನ ಬಗ್ಗೆ ಅಲ್ಲ. ನಮ್ಮ ವೈಯಕ್ತಿಕ ಬದುಕಿನ ಬಗ್ಗೆ. ನಮ್ಮ ಧರ್ಮದ ಬಗ್ಗೆ. ಈ ದೇಶದ ಉಳಿವಿನ ಬಗ್ಗೆ. ಇದನ್ನೇ ಬಸವೇಶ್ವರರು ಹೇಳಿದ್ದು ಎಂದು ಈಶ್ವರಪ್ಪ ಹೇಳಿದರು.

ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ : ಯಾವುದೇ ಸಮಾಜದ ವ್ಯಕ್ತಿ ಹೊರಗಡೆ ಸಿಕ್ಕಾಗ ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನೆ ಮಾಡಿ. ಬಿಜೆಪಿ ಅವರಿಗೆ ಏನು ಮಾಡಿಲ್ಲ ಎಂದರೆ ಆ ಸಮುದಾಯದ ವೋಟ್ ಕೇಳಲೇಬೇಡಿ. ಎಲ್ಲಾ ಸಮುದಾಯದವರು ಬಿಜೆಪಿಗೆ ವೋಟು ನೀಡುತ್ತೇವೆ ಅಂತ ಹೇಳುತ್ತಿದ್ದಾರೆ. ಕೆಲವರು ಈ ಸಂದರ್ಭದಲ್ಲಿ ಜಾತಿ ಉಪಜಾತಿಯನ್ನು ತರುತ್ತಿದ್ದಾರೆ‌. ಶಿವಮೊಗ್ಗದಲ್ಲಿ ಈ ಜಾತಿ ವ್ಯವಸ್ಥೆಗೆ ಮಾರುಹೋಗುತ್ತಾರೆ ಎಂಬ ನಂಬಿಕೆ ನನಗಿಲ್ಲ. ನೂರಕ್ಕೆ ನೂರು ನಮ್ಮ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆಲ್ಲುತ್ತಾರೆ. ಹಿಂದೂ ಸಮಾಜಕ್ಕೆ ಮಾದರಿ ನಮ್ಮ ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪಕ್ಕಿಂತ ಹಿಂದೂ ಯಾರೂ ಇಲ್ಲ. ಇಂತಹ ಹಿಂದೂ ಸಮಾಜ ಕಟ್ಟುವ ದಿಕ್ಕಿನಲ್ಲಿ ಶಿವಮೊಗ್ಗ ನಾಯಕ ಚನ್ನಬಸಪ್ಪ ಶ್ರಮಿಸಲಿದ್ದಾರೆ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ‌.

ಭದ್ರತೆ ಇರುವುದಿಲ್ಲ : ಬಿಜೆಪಿ ಬಿಟ್ಟು ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕೂಡ ನಮಗೆ ಭದ್ರತೆ ಇರುವುದಿಲ್ಲ ಕಾಂಗ್ರೆಸ್ ಹಿಂದು ಮುಸ್ಲಿಂ ಎಂದು ಪ್ರತ್ಯೇಕ ಮಾಡಿ ಮುಸ್ಲಿಂ ವೋಟ್ ಗಳನ್ನ ಪಡೆಯುತ್ತಿದೆ. ವರ್ಣ ಪ್ರೇರೇಪಿಸಿ ಹಿಂದೂ ಸಮಾಜವನ್ನು ನಿಕೃಷ್ಟ ಮಾಡುವ ಪ್ರಯತ್ನ ಮಾಡಿಕೊಂಡು ಬಂದಿದೆ‌. ಯಾರು ರಾಷ್ಟ್ರೀಯವಾದಿ ಮುಸಲ್ಮಾನರಿದ್ದಾರೋ ಅವರು ಬಿಜೆಪಿಗೆ ವೋಟ್ ನೀಡುತ್ತಾರೆ. ರಾಷ್ಟ್ರ ದ್ರೋಹಿ ಮುಸ್ಲಿಂ ಸಹವಾಸಕ್ಕೆ ನಾವು ಹೋಗುವುದು ಬೇಡ. ಯಡಿಯೂರಪ್ಪ ಜಾತಿವಾದಿ ಅಲ್ಲ, ಅವರು ರಾಷ್ಟ್ರೀಯವಾದಿ. ಅವರು ರಾಷ್ಟ್ರವಾದದ ಮೇಲೆ ಸರ್ಕಾರ ನಡೆಸಿಕೊಂಡು ಬಂದಿದ್ದಾರೆ.

ಬಿಎಸ್‌ವೈ ಊರೂರು ಸುತ್ತಿದ್ದಾರೆ : ಈ ತನಕ ನಮಗೆ ಪೂರ್ಣ ಬಹುಮತ ಬಂದಿಲ್ಲ. ಹಾಗಾಗಿ ಯಡಿಯೂರಪ್ಪನವರು ಈಗಲೂ ಬಿಸಿಲು ಎನ್ನದೆ ಊರೂರು ಸುತ್ತುತ್ತಿದ್ದಾರೆ. ಎಲ್ಲಾ ಒಕ್ಕಲಿಗರು ಬನ್ನಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ. ಸಿದ್ದರಾಮಯ್ಯ ಕುರುಬರನ್ನ ಕರೆಯುತ್ತಾರೆ. ಯಡಿಯೂರಪ್ಪ ಪಕ್ಷ ಬಿಜೆಪಿ ಜಾತಿವಾದಿ ಪಕ್ಷ ಅಲ್ಲ ರಾಷ್ಟ್ರೀಯವಾದಿ ಪಕ್ಷ. ನಾವೆಲ್ಲಾ ಸಂಕುಚಿತ ವ್ಯಕ್ತಿಗಳ ಬಗ್ಗೆ ಚರ್ಚೆ ಮಾಡುವುದು ಬೇಡ. ಕಾಂಗ್ರೆಸ್ ನಿರ್ನಾಮ ಆಗಿದೆ ,ಸಿಎಂ ಆಗಬೇಕು ಎಂದು ಸ್ಪರ್ಧೆ ಏರ್ಪಟ್ಟಿದೆ. ಜನತಾದಳ ಯಾರಿಗೂ ಬಹುಮತ ಬರಬಾರದು ತಾವು ಸಿಎಂ ಆಗಬೇಕು ಅಂತ ಹವಣಿಸುತ್ತಿದೆ. ಇಷ್ಟು ವರ್ಷ ಪೂರ್ಣ ಬಹುಮತ ಇಲ್ಲದ ಸಮಯದಲ್ಲಿ ಯಡಿಯೂರಪ್ಪನವರು ನಾಲ್ಕು ಬಾರಿ ಸಿಎಂ ಆಗಿದ್ದರು ಎಂದು ಈಶ್ವರಪ್ಪ ಹೇಳಿದರು.

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

5 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago