Mysore
17
clear sky

Social Media

ಶನಿವಾರ, 20 ಡಿಸೆಂಬರ್ 2025
Light
Dark

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ: ಸಿಎಂ

ಬೆಂಗಳೂರು: ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ತಮ್ಮನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಅವರು, ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಕೆಂಪಣ್ಣ ಮನವಿ ಮಾಡಿದರು.

2013 ರಿಂದ 2018ರವರೆಗೆ ಇದ್ದ ಎಲ್‍ಒಸಿ ವ್ಯವಸ್ಥೆಯನ್ನೇ ಮತ್ತೆ ಜಾರಿಗೆ ತರುವಂತೆ ಕೆಂಪಣ್ಣ ಒತ್ತಾಯ ಮಾಡಿದ್ದು, ರಾಜ್ಯದ ಗುತ್ತಿಗೆದಾರರಿಗೆ ಪ್ರಥಮ ಮತ್ತು ಹೆಚ್ಚಿನ ಆದ್ಯತೆ ನೀಡಿ ಎಂದು ಮನವಿ ಮಾಡಿದರು.

ಬಜೆಟ್ ಅಧಿವೇಶನದ ನಂತರ ಗುತ್ತಿಗೆ ಬಾಕಿ ಮೊತ್ತ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಪದಾಕಾರಿಗಳಾದ ಆರ್.ಅಂಬಿಕಾಪತಿ, ಜಿ.ಎಂ ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್, ಆರ್.ಮಂಜುನಾಥ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!