Mysore
17
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಬಿಜೆಪಿ ನನ್ನನ್ನ ಸೋಲಿಸೋಕೆ ಪಣ ತೊಟ್ಟಿದೆ : ಸಿದ್ದರಾಮಯ್ಯ

ಮೈಸೂರು : ನನ್ನನ್ನು ಹೇಗಾದರೂ ಮಾಡಿ ಸೋಲಿಸಬೇಕು ಎಂಬುದು ಬಿಜೆಪಿ ಉದ್ದೇಶ. ಅದಕ್ಕಾಗಿಯೇ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​ ಸಂತೋಷ್ ವರುಣಾ ವಿಧಾನಸಭೆ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಮಠದ ಹೆಲಿಪ್ಯಾಡ್​ನಲ್ಲಿ ಶನಿವಾರ ಮಾತನಾಡಿದ ಅವರು, ವಿ. ಸೋಮಣ್ಣರನ್ನು ವರುಣಕ್ಕೆ ಕರೆತಂದು ನಿಲ್ಲಿಸಿರುವುದೇ ಸಂತೋಷ್​. ಸಂತೋಷ್ ಆರ್​ಎಸ್​ಎಸ್​ನ ವ್ಯಕ್ತಿ. ನನಗೆ ಅವರ ಬಗ್ಗೆ ವೈಯಕ್ತಿಕವಾಗಿ ದ್ವೇಷವಿಲ್ಲ. ನಾನು ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂದಾಗ ಅಲ್ಲಿಗೂ ಬಂದಿದ್ದರು. ಈಗ ವರುಣಾ ಕ್ಷೇತ್ರಕ್ಕೆ ಬಂದು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ