ಚೆನ್ನೈ : ಸನಾತನ ಧರ್ಮ ಕುರಿತು ತನ್ನ ಹೇಳಿಕೆಯು ವಿವಾದವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು, ಬಿಜೆಪಿಯು ತನ್ನ ಹೇಳಿಕೆಯನ್ನು ತಿರುಚುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ನಾನು ಸನಾತನ ಧರ್ಮವನ್ನು ಮಾತ್ರ ಟೀಕಿಸಿದ್ದೆ ಮತ್ತು ಸನಾತನ ಧರ್ಮವನ್ನು ನಿರ್ಮೂಲನಗೊಳಿಸಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ನಾನು ಇದನ್ನು ನಿರಂತರವಾಗಿ ಹೇಳುತ್ತೇನೆ. ನಾನು ನರಮೇಧಕ್ಕೆ ಕರೆ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಹೇಳುತ್ತಿದ್ದಾರೆ,
ಇತರರು ದ್ರಾವಿಡವಾದವನ್ನು ನಿರ್ಮೂಲನಗೊಳಿಸಬೇಕು ಎಂದು ಹೇಳುತ್ತಿದ್ದಾರೆ. ಡಿಎಂಕೆಯವರನ್ನು ಕೊಲ್ಲಬೇಕು ಎಂದು ಹೇಳಿಕೆ ನೀಡುತ್ತಿರುವುದರ ಅರ್ಥವೇ? ಪ್ರಧಾನಿ ಮೋದಿಯವರು ‘ಕಾಂಗ್ರೆಸ್ ಮುಕ್ತ ಭಾರತ ’ಎಂದು ಹೇಳಿದಾಗ ಕಾಂಗ್ರೆಸಿಗರನ್ನು ಕೊಲ್ಲಬೇಕು ಎನ್ನುವುದು ಅದರ ಅರ್ಥವೇ ಎಂದು ಪ್ರಶ್ನಿಸಿದರು.
ಸನಾತನ ಎಂದರೇನು? ಸನಾತನ ಎಂದರೆ ಯಾವುದನ್ನೂ ಬದಲಿಸಬಾರದು ಮತ್ತು ಎಲ್ಲವೂ ಶಾಶ್ವತ ಎಂದು ಅರ್ಥ. ಆದರೆ ದ್ರಾವಿಡ ಮಾದರಿಯು ಬದಲಾವಣೆಗೆ ಕರೆ ನೀಡುತ್ತದೆ ಮತ್ತು ಎಲ್ಲರೂ ಸಮಾನವಾಗಿರಬೇಕು ಎಂದು ಹೇಳುತ್ತದೆ. ಬಿಜೆಪಿಯವರಿಗೆ ಇದು ಮಾಮೂಲಿ ಕೆಲಸವಾಗಿದೆ ಎಂದು ಹೇಳಿದ ಉದಯನಿಧಿ, ‘ಅವರು ನನ್ನ ವಿರುದ್ಧ ಏನೇ ಪ್ರಕರಣಗಳನ್ನು ದಾಖಲಿಸಿದರೂ ಎದುರಿಸಲು ನಾನು ಸಿದ್ಧನಿದ್ದೇನೆ. ಬಿಜೆಪಿಗೆ ಇಂಡಿಯಾ ಮೈತ್ರಿಕೂಟದ ಬಗ್ಗೆ ಭಯವಿದೆ ಮತ್ತು ಅದರಿಂದ ವಿಷಯಾಂತರಕ್ಕಾಗಿ ಇದನ್ನೆಲ್ಲ ಹೇಳುತ್ತಿದ್ದಾರೆ. ಒಂದೇ ಕುಲ, ಒಂದೇ ದೇವರು ಎನ್ನುವುದು ಡಿಎಂಕೆಯ ನೀತಿಯಾಗಿದೆʼ ಎಂದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…