BREAKING NEWS

ಬಿಜೆಪಿ ಅತ್ಯಂತ ಅಶಿಸ್ತಿನ ಪಕ್ಷ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದಿರುವುದು ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ತೋರಿಸುತ್ತದೆ ಮತ್ತು ಅದೊಂದು ‘ಅತ್ಯಂತ ಅಶಿಸ್ತಿನ’ ರಾಜಕೀಯ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

‘ಅವರಲ್ಲಿ ಗುಂಪುಗಾರಿಕೆ ಇದೆ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ತಮ್ಮನ್ನು ಶಿಸ್ತಿನ ಪಕ್ಷ ಎಂದು ಕರೆದುಕೊಳ್ಳುತ್ತದೆ. ಆದರೆ, ಅದು ಅತ್ಯಂತ ಅಶಿಸ್ತಿನ ಪಕ್ಷ ಎಂದು ಆರೋಪಿಸಿದರು.

ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಬಿಜೆಪಿ ಇನ್ನೂ ಕೆಳಮನೆಯಲ್ಲಿ ತನ್ನ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರ ಸಚಿವ ಮನ್‌ಸುಖ್ ಮಾಂಡವಿಯಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಕೇಂದ್ರದ ಚುನಾವಣಾ ವೀಕ್ಷಕರನ್ನಾಗಿ ನೇಮಿಸಿದ್ದಾರೆ.

ಬಿಜೆಪಿಯ ಮುಖ್ಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಅನಿಲ್ ಬಲುನಿ ಮಾತನಾಡಿ, ಇಬ್ಬರು ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ವಿಧಾನಸಭೆಯಲ್ಲಿ ಪಕ್ಷದ ನಾಯಕನನ್ನು ಅದರ ಶಾಸಕರು ಆಯ್ಕೆ ಮಾಡುತ್ತಾರೆ ಎಂದಿದ್ದಾರೆ.

ರಾಜ್ಯ ಚುನಾವಣೆಯಲ್ಲಿ ಸೋತ ನಂತರ, ಬಿಜೆಪಿ ಇನ್ನೂ ವಿಧಾನಸಭೆಯಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಿಲ್ಲ. ಬಜೆಟ್ ಅಧಿವೇಶನ ಆರಂಭವಾಗಿದ್ದರೂ, ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಹೈಕಮಾಂಡ್ ತಮ್ಮ ಆಯ್ಕೆಗಳನ್ನು ಅಳೆದು ತೂಗುವಲ್ಲಿ ನಿರವಾಗಿದೆ.

ರಾಜ್ಯದಲ್ಲಿ ಜಾತಿ ಸಮೀಕರಣವನ್ನು ಸರಿದೂಗಿಸಿಕೊಂಡು ಹಳೆ ನಾಯಕನಿಗೆ ಅಂಟಿಕೊಳ್ಳಬೇಕೋ ಅಥವಾ ಹೊಸ ನಾಯಕನ ಮೇಲೆ ನಂಬಿಕೆ ಇಡಬೇಕೋ ಎಂಬುದನ್ನು ನಿರ್ಧರಿಸಲು ಬಿಜೆಪಿ ಉದ್ದೇಶಿಸಿರುವ ಕಾರಣ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ.

224 ಸದಸ್ಯ ಬಲದ ವಿಧಾನಸಭೆಗೆ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗೆದ್ದುಕೊಂಡಿತು.

andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

4 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

5 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

5 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

5 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

6 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

6 hours ago