BREAKING NEWS

ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗಳಿಸುವಂತೆ ಬಿಜೆಪಿಯಿಂದ ಒತ್ತಡ ಹೇರಲಾಗುತ್ತಿದೆ : ಡಿಕೆಶಿ ಆರೋಪ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳವಂತೆ ಮಾಡಲು ಸಿಎಂ ಕಚೇರಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾ ತಂಡ ಪ್ರಯತ್ನಿಸುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ. ಸಿಎಂ ಕಚೇರಿಯ ಸಿಬ್ಬಂದಿ ಹಾಗೂ ಸಿಎಂ ಲೀಗಲ್ ಟೀಂ ಸದಸ್ಯರು, ರಾಜ್ಯದ ನಾನಾ ವಿಧಾನಸಭಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಚುನಾವಣಾಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗಳಿಸುವಂತೆ ಒತ್ತಡ ಹೇರಲಾಗುತ್ತಿದೆ. ಜೊತೆಗೆ, ತಮ್ಮ ಅಭ್ಯರ್ಥಿಗಳ ನಾಮಪತ್ರಗಳಲ್ಲಿ ಲೋಪಗಳಿದ್ದರೂ ಅವುಗಳನ್ನು ಅಂಗೀಕರಿಸುವಂತೆ ಚುನಾವಣಾಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸವದತ್ತಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರತ್ನಾ ಮಾಮಡಿ ಅವರ ನಾಮಪತ್ರ ತಿರಸ್ಕೃತವಾಗುವ ಲಕ್ಷ್ಮಣಗಳು ಗೋಚರಿಸಿವೆ. ಅವರು, ನಾಮಪತ್ರದಲ್ಲಿ ಲೋಪ ಎಸಗಿದ್ದಾರೆಂದು ತಿಳಿದುಬಂದಿದೆ. ನಾಮಪತ್ರ ಪರಿಶೀಲಿಸಿದ ನಂತರ ಅಫಿಡವಿಟ್ ಸಲ್ಲಿಸಿರುವ ಆರೋಪಗಳೂ ಕೇಳಿಬಂದಿವೆ. ಆದರೆ, ಅವರ ನಾಮಪತ್ರವನ್ನು ಅಂಗೀಕಾರಿಸುವಂತೆ ಸಿಎಂ ಕಚೇರಿಯ ಸಿಬ್ಬಂದಿಯು ಸವದತ್ತಿ ಚುನಾವಣಾಧಿಕಾರಿಗಳಿಗೆ ಫೋನ್ ಮಾಡಿ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ರತ್ನಾ ಮಾಮನಿ ಅವರು, ಅಫಿಡವಿಟ್ ಅನ್ನು ರಾತ್ರೋರಾತ್ರಿ ಸಲ್ಲಿಸಿದ್ದಾರೆ. ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಕಚೇರಿಯ ಅವಧಿಯಲ್ಲದ ಅವಧಿಯಲ್ಲಿ ಪ್ರಕಟವಾಗಿದೆ. ಆದರೂ, ಇದನ್ನು ಪರಿಗಣಿಸದೇ ಅವರ ನಾಮಪತ್ರವನ್ನು ಅಂಗೀಕರಿಸಲು ಚುನಾವಣಾಧಿಕಾರಿಗಳ ಮೇಲೆ ಸಿಎಂ ಕಚೇರಿಯ ಸಿಬ್ಬಂದಿ ಫೋನ್ ಮೂಲಕ ಒತ್ತಡ ಹಾಕಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಭೀತಿಯಲ್ಲಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಅನೇಕ ರೀತಿಯ ತಂತ್ರಗಾರಿಕೆಗಳನ್ನು ಪ್ರಯೋಗಿಸುತ್ತಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಹುರಿಯಾಳುಗಳಲ್ಲಿ ಕೆಲವರ ನಾಮಪತ್ರಗಳನ್ನು ತಿರಸ್ಕೃತಗೊಳಿಸುವಲ್ಲಿ ಬಿಜೆಪಿ ಪರೋಕ್ಷವಾಗಿ ಪಾತ್ರ ವಹಿಸುತ್ತಿದೆ ಎಂದು ಅವರು ಆರೋಪಿಸಿದರು.

ಲಿಂಗಾಯತ ಡ್ಯಾಂ ಈಗಾಗಲೇ ಒಡೆದು ಹೋಗಿದೆ : ಲಿಂಗಾಯತ ಸಮುದಾಯವನ್ನು ಅಣೆಕಟ್ಟಿಗೆ ಹೋಲಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಲಿಂಗಾಯತ ಡ್ಯಾಂ ಒಡೆಯುತ್ತೇವೆ ಎಂದು ಡಿಕೆ ಶಿವಕುಮಾರ್ ಅಂದುಕೊಂಡಿರಬಹುದು. ಆದರೆ, ಲಿಂಗಾಯತ ಡ್ಯಾಂ ಒಡೆಯಲು ಸಾಧ್ಯವಿಲ್ಲ. ಸಮುದಾಯದ ಅಭಿವೃದ್ಧಿಗಾಗಿ ನಾವು ಅನೇಕ ಕೆಲಸಗಳನ್ನು ಮಾಡಿದ್ದೇವೆ. ಆದ್ದರಿಂದ, ಲಿಂಗಾಯತ ಸಮುದಾಯವು ನಮ್ಮ ಕೈ ಹಿಡಿಯಲಿದೆ ಎಂದು ಏ. 21ರಂದು ಹೇಳಿಕೆ ನೀಡಿದ್ದರು. ಇದಕ್ಕೆ ಉತ್ತರ ಕೊಟ್ಟ ಶಿವಕುಮಾರ್, “ಲಿಂಗಾಯತ ಅಣೆಕಟ್ಟು ಈಗಾಗಲೇ ಒಡೆದು ಹೋಗಿದೆ. ಅಣೆಕಟ್ಟಿನಲ್ಲಿದ್ದ ಅಪಾರ ನೀರು, ಕಾಂಗ್ರೆಸ್ ಅನ್ನೋ ಸಮುದ್ರವನ್ನು ಸೇರಿಕೊಂಡಿದೆ” ಎಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕೂಡಲೇ ಕಾಂಗ್ರೆಸ್ಸಿಗೆ ಶಕ್ತಿ ಬರುತ್ತೆ ಎಂದು ತಿಳಿದಿದ್ದರೆ ಅದು ತಪ್ಪು ಎಂದು ಸಿಎಂ ಹೇಳಿದ್ದರು. ಇದಕ್ಕೂ ಟಾಂಗ್ ಕೊಟ್ಟ ಶಿವಕುಮಾರ್, ಜಗದೀಶ್ ಶೆಟ್ಟರ್ ಅವರಿಂದ ಕಾಂಗ್ರೆಸ್ಸಿಗೆ ನಿಜಕ್ಕೂ ಬಲ ಬಂದಿದೆ. ಅವರು ನಮ್ಮ ಪಕ್ಷದ ಸ್ಟಾರ್ ಪ್ರಚಾರಕರೂ ಆಗಿರಲಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ರಾಜೀನಾಮೆ ನೀಡಲಿ : ಮಖ್ಯಮಂತ್ರಿಗಳ ಲೀಗಲ್ ಟೀಂ ನಿಂದ ಅಧಿಕಾರ ದುರುಪಯೋಗ ನಡೀತಾ ಇದೆ. ಸಿಎಂ ಕಚೇರಿ, ಸಿಎಂ ಲೀಗಲ್ ಟೀಂ ಎರಡೂ ಸೇರಿಕೊಂಡು ನನ್ನ ವಿರುದ್ಧ, ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇನ್ನು ಈ ಸರ್ಕಾರದ ಅವಧಿ ಕೇವಲ 20 ದಿನವಿದೆ. ಅಷ್ಟರೊಳಗೆ ಸಿಎಂ ರಾಜೀನಾಮೆ ಕೊಟ್ಟರೆ ಒಳ್ಳೆಯದು ಎಂದು ಅವರು ಹೇಳಿದ್ದಾರೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago