BREAKING NEWS

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಬಿಜೆಪಿ ನಾಯಕನ ಬಂಧನ

ಮಧ್ಯಪ್ರದೇಶ : ರಸ್ತೆಬದಿ ಕುಳಿತಿದ್ದ ಬುಡಕಟ್ಟು ಯುವಕನ ಮೇಲೆ ಬಿಜೆಪಿ ನಾಯಕ ಪ್ರವೇಶ್‌ ಶುಕ್ಲಾ ಮೂತ್ರ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಮಧ್ಯರಾತ್ರಿ ಬುಡಕಟ್ಟು ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ. ಈ ಕೃತ್ಯದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಕ್ಯಾಮರಾದಲ್ಲಿ ಸೆರೆಯಾದ ವ್ಯಕ್ತಿ ಪ್ರವೇಶ್ ಶುಕ್ಲಾ ಅವರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಕಳೆದ ವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಘಟನೆ ನಡೆದ 6 ದಿನಗಳ ನಂತರ ಈ ವಿಡಿಯೋವನ್ನು ಪೊಲೀಸರು ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ, ಪ್ರವೇಶ್ ಶುಕ್ಲಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ) ಮತ್ತು SC/ST ಕಾಯಿದೆಯ ಅಡಿಯಲ್ಲಿ ಶುಕ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ಈ ವೈರಲ್ ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರವೇಶ್ ಶುಕ್ಲಾ ವಿರುದ್ಧ ಆರೋಪ ಹೊರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿಯೂ ಹೇಳಿದ್ದರು. ಅಲ್ಲದೆ, ಆರೋಪಿಗೆ “ಕಠಿಣವಾದ ಶಿಕ್ಷೆ” ಯನ್ನು ಸರ್ಕಾರ ಖಚಿತಪಡಿಸುತ್ತದೆ. “ನಾವು ಅವನನ್ನು ಯಾವುದೇ ಕಾರಣಕ್ಕೂ ಸುಮ್ಮನೇ ಬಿಡುವುದಿಲ್ಲ’’ ಎಂದು ಶಿವರಾಜ್‌ ಸಿಂಗ್ ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಇನ್ನು, ಆರೋಪಿ ಬಿಜೆಪಿಗೆ ಸೇರಿದವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವರಾಜ್‌ ಸಿಂಗ್ ಚೌಹಾಣ್, ಅಪರಾಧಿಗಳಿಗೆ ಜಾತಿ, ಧರ್ಮ ಮತ್ತು ಪಕ್ಷವಿಲ್ಲ. ಒಬ್ಬ ಅಪರಾಧಿ ಕೇವಲ ಅಪರಾಧಿ. ಅವನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇದೇ ರೀತಿಯ ಭಾವನೆಗಳನ್ನು ಪ್ರತಿಧ್ವನಿಸಿದ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ, “ಅವರು ಯಾವುದೇ ಪಕ್ಷವಾಗಿದ್ದರೂ, ಯಾರೇ ತಪ್ಪು ಮಾಡಿದರೂ ಶಿಕ್ಷೆಗೆ ಗುರಿಯಾಗುತ್ತಾರೆ” ಎಂದು ಹೇಳಿದ್ದಾರೆ.

ಈ ಘಟನೆ ಮೂರು ತಿಂಗಳ ಹಿಂದೆ ನಡೆದಿದ್ದು ಎನ್ನಲಾಗಿದೆ. ವಿಡಿಯೋ ವೈರಲ್‌ ಆದ ಬಳಿಕ ಅದು ಬೆಳಕಿಗೆ ಬಂದಿದ್ದು, ಮಂಗಳವಾರ ಪ್ರವೇಶ್‌ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

lokesh

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

2 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

10 hours ago