BREAKING NEWS

ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ: ಆಮಂತ್ರಣ ಪತ್ರಿಕೆ ವೈರಲ್

ಉತ್ತರಕಾಂಡ್‌: ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದಕ್ಕೆ ಕಾರಣ ಉತ್ತರಾಖಂಡ್‌ ನ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ ಜೊತೆ ಹಸೆಮಣೆ ಏರಲು ಸಜ್ಜಾಗಿರುವುದು!‌

ಬೇನಾಮ್‌ ಪುತ್ರಿಯ ಮದುವೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದ್ದು, ಬಿಜೆಪಿ ಬೆಂಬಲಿಗರು ಹಾಗೂ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದುತ್ವವಾದಿಗಳು ಮಾಜಿ ಶಾಸಕ ಬೇನಾಮ್‌ ಅವರ ಇಬ್ಬಗೆ ನೀತಿಯ ಕುರಿತು ಟ್ರೋಲ್‌ ಮಾಡಿದ್ದಾರೆ. ಬೇರೆಯವರು ಮುಸ್ಲಿಂ ಯುವಕನನ್ನು ವಿವಾಹವಾದರೆ ಲವ್‌ ಜಿಹಾದ್‌ ಎಂದು ಆರೋಪಿಸುತ್ತಿರುವ ಬಗ್ಗೆ ಜಾಲತಾಣದಲ್ಲಿ ಟೀಕೆಯನ್ನು ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

“ದ ಕೇರಳ ಸ್ಟೋರಿ” ಸಿನಿಮಾಕ್ಕೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೆರಿಗೆ ವಿನಾಯ್ತಿ ನೀಡಲಾಗಿದ್ದು, ಇಲ್ಲಿ ಬಿಜೆಪಿ ಮುಖಂಡರೊಬ್ಬರ ಮಗಳು ಮುಸ್ಲಿಂ ಯುವಕನ ಜೊತೆ ವಿವಾಹವಾಗುತ್ತಿದ್ದಾರೆ. ಬಿಜೆಪಿಯ ಇಂತಹ ಇಬ್ಬಗೆಯ ನೀತಿಗಳು ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸಲಿದೆ ಎಂದು ಫೇಸ್‌ ಬುಕ್‌ ಬಳಕೆದಾರರೊಬ್ಬರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಯುವಕರು ಹಿಂದೂ ಯುವತಿಯನ್ನು ವಿವಾಹವಾಗುವ ಮೂಲಕ ಮತಾಂತರಗೊಳಿಸುತ್ತಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಬಲ ಪಂಥೀಯ ಸಂಘಟನೆಯ ಕಾರ್ಯಕರ್ತರು ಇದೊಂದು ಲವ್‌ ಜಿಹಾದ್‌ ಎಂದು ಕರೆದಿದ್ದರು.

ಭಾರತದಲ್ಲಿ ಮತಾಂತರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ಬಿಜೆಪಿಯ ಮುಖಂಡರು ತಮ್ಮ ಮಗಳನ್ನು ಮುಸ್ಲಿಂ ಯುವಕನಿಗೆ ಧಾರೆ ಎರೆಯುತ್ತಿದ್ದಾರೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ , ಬಜರಂಗ ದಳ ವಿರೋಧಿಸಬೇಕಾಗಿದೆ ಎಂದು ಪೌರಿ ದೇವಾಲಯ ಆಡಳಿತ ಮಂಡಳಿಯ ಸದಸ್ಯರೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ಮೇ 28ರಂದು ಬೇನಾಮಿ ಪುತ್ರಿಯ ವಿವಾಹ ನಡೆಯಲಿದೆ. ಈ ಮದುವೆ ಕಾರ್ಯಕ್ರಮಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಮುಖಂಡರನ್ನು ಆಹ್ವಾನಿಸಲಾಗಿದೆ ಎಂದು ವರದಿ ತಿಳಿಸಿದೆ.

andolanait

Recent Posts

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

2 hours ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

2 hours ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

3 hours ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

3 hours ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

4 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

4 hours ago