BREAKING NEWS

ವಿಧಾನಸಭೆ ಉಪಸಭಾಧ್ಯಕ್ಷರ ಮೇಲೆ ಕಾಗದ ಹರಿದು ಎಸೆದ ಬಿಜೆಪಿ ಶಾಸಕರು

ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದು ತೂರಿದ ಘಟನೆ ನಡೆಯಿತು.

ಕೇಂದ್ರದ ವಿಪಕ್ಷಗಳ ಸಭೆಗೆ ಆಗಮಿಸಿದ್ದ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿ, ದುರ್ಬಳಕೆ ಮಾಡಲಾಗಿತ್ತು ಎಂದು ಆರೋಪಿಸಿ, ಬುಧವಾರ ಸದನದ ಬಾವಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ನಡೆಸಿದ್ದು, ಈ ಹಿನ್ನೆಲೆ ಭೋಜನ ವಿರಾಮ ರದ್ದುಪಡಿಸಿ ಸ್ಪೀಕರ್ ಕಲಾಪ ಮುಂದುವರಿಸಿದರು.

ಬಳಿಕ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಮಾತನಾಡುತ್ತಿದ್ದ ವೇಳೆ ಸದನದ ಬಾವಿಯಲ್ಲಿ ಧರಣಿ ನಡೆಸುತ್ತಿದ್ದ ಬಿಜೆಪಿ ಸದಸ್ಯರು ಏಕಾ ಏಕಿ ಉಪಸಭಾಧ್ಯಕ್ಷರ ಕುರ್ಚಿಯತ್ತ ವಿಧೇಯಕ ಪ್ರತಿಗಳನ್ನ ಹರಿದು ಎಸೆದಿದ್ದಾರೆ. ಇದಕ್ಕೆ ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಸೇರಿ ಸಚಿವರು, ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

24 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

30 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

39 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago