ಬೆಳಗಾವಿ : ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13 ರಿಂದ 14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಕೇಂದ್ರ ಮತಕ್ಷೇತ್ರದಲ್ಲಿ ತಮ್ಮ ಬೀಗರಾದ ಜಗದೀಶ ಶೆಟ್ಟರ್ ಅವರು ಸ್ಪರ್ಧಿಸಿದ್ದು, ಅಲ್ಲಿನ ವಾತಾವರಣ ಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್ ಶೆಟ್ಟರ್ ಪಕ್ಷ ಭೇದ ಮರೆತು ಕೆಲಸ ಮಾಡಿದ್ದರಿಂದ ಚೆನ್ನಾಗಿ ನಡೀತಾ ಇದೆ. ಅವರು ಬರ್ತಾರೆ ಎಂದು ತಮ್ಮ ಬೀಗರಾದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ ಪರವಾಗಿ ಬ್ಯಾಟಿಂಗ್ ಮಾಡಿದರು.
ಅಲ್ಲದೇ ಶೆಟ್ಟರ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಾಲಿಟಿಕ್ಸ್‌ನಲ್ಲಿ ಹಾಗೆ ಎಲ್ಲಾ ಆಗೋದು ಎಂದ ಅವರು, ಮೊದಲಿಂದಲೂ ಜಗದೀಶ್ ಶೆಟ್ಟರ್ ಅಲ್ಲಿ ಹೆಸರು ಮಾಡಿದ್ದಾರೆ ಎಂದರು.
ಬಿಜೆಪಿ ಸಂಸದರಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಪರವಾಗಿ ಸಪೋರ್ಟ್ ಕುರಿತು ಪ್ರತಿಕ್ರಿಯಿಸಿದ ಅವರು, ಅವರದು ಅಲ್ಲಿ, ನಮ್ಮದು ಇಲ್ಲಿ ಎಂದು ಸಮಜಾಯಿಷಿ ನೀಡಿದರು. ಮುಂದಿನ ಚುನಾವಣೆಯಲ್ಲಿ ತಾವು ಪಕ್ಷ ಬದಲಾವಣೆ ಮಾಡುತ್ತೀರಾ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪಕ್ಷ ಬದಲಾವಣೆ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೆ ಇರುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಬಿಜೆಪಿಯಿಂದಲೇ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…