BREAKING NEWS

ಬಿಜೆಪಿ-ಆರ್‌ಎಸ್‌ಎಸ್‌ ಸಿದ್ಧಾಂತ ಮಹಿಳಾ ವಿರೋಧಿ ಸಿದ್ಧಾಂತ: ಮಲ್ಲಿಕಾರ್ಜುನ ಖರ್ಗೆ

ರಾಯ್‌ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಸುಳ್ಳಿ ಸರದಾರ’ ಎಂದು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ದೇಶದ ಜನ ಎಚ್ಚೆತ್ತುಕೊಂಡಿದ್ದು, 2024ರಲ್ಲಿ ಅವರ ‘ಕುತಂತ್ರ’ ಮುಂದುವರಿಯುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ.

ರಾಯ್‌ಪುರದಿಂದ 220 ಕಿಮೀ ದೂರದಲ್ಲಿರುವ ರಾಯ್‌ಗಢ್ ಜಿಲ್ಲೆಯಲ್ಲಿ ಛತ್ತೀಸ್‌ಗಢ ಸರ್ಕಾರದ ಭರೋಸೆ ಕಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಖರ್ಗೆ, ಕಾಂಗ್ರೆಸ್ ಪಕ್ಷ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸದಿದ್ದರೆ ಮೋದಿ ಮತ್ತು ಅಮಿತ್ ಶಾ ಇಬ್ಬರೂ ಎಂದಿಗೂ ಪ್ರಧಾನಿ ಮತ್ತು ಗೃಹ ಮಂತ್ರಿಯಾಗುತ್ತಿರಲಿಲ್ಲ ಎಂದಿದ್ದಾರೆ.

ಪಿಎಂ ಮೋದಿ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಿದಾಗಲೆಲ್ಲಾ ಕಾಂಗ್ರೆಸ್ ಪಕ್ಷವನ್ನು ದೂಷಿಸುವ ಸುಳ್ಳಿನ ಸರದಾರ. ಇತರ ರಾಜ್ಯಗಳ ಮುಖ್ಯಮಂತ್ರಿಗಳು ಅವರ ಮಾತು ಕೇಳದಿದ್ದರೆ ಇಡಿ, ಐಟಿ ಮತ್ತು ಇತರ ಏಜೆನ್ಸಿಗಳಿಂದ ದಾಳಿ ಮಾಡಿಸುತ್ತಾರೆ. ಅವರು(ಬಿಜೆಪಿ) ಪರಿವಾರದ (ರಾಜವಂಶದ ರಾಜಕೀಯ) ಬಗ್ಗೆ ಮಾತನಾಡುತ್ತಾರೆ. ಆದರೆ 1989 ರ ನಂತರ ಗಾಂಧಿ ಕುಟುಂಬದಿಂದ ಯಾರು ಪ್ರಧಾನಿಯಾಗಿದ್ದಾರೆ ಎಂದು ನನಗೆ ತಿಳಿಸಲಿ” ಎಂದು ಕಾಂಗ್ರೆಸ್ ಅಧ್ಯಕ್ಷ ಸವಾಲು ಹಾಕಿದರು.

ಮೋದಿ ಸರ್ಕಾರ ರಾಷ್ಟ್ರೀಯ ಆಸ್ತಿಯನ್ನು ಮಾರಾಟ ಮಾಡುತ್ತಿದೆ ಮತ್ತು ಉತ್ತಮ ಸರ್ಕಾರಿ ಸಂಸ್ಥೆಗಳಿಗೆ ಹಾನಿ ಮಾಡಿದೆ ಎಂದು ಖರ್ಗೆ ಆರೋಪಿಸಿದರು.

ಪ್ರಧಾನಿ ಮೋದಿ ಅವರು ಕೇವಲ ಚುನಾವಣೆ ನಡೆಯುವ ರಾಜ್ಯಗಳಿಗೆ ಮಾತ್ರ ಭೇಟಿ ನೀಡುತ್ತಾರೆ. ಆದರೆ ಕಳೆದ ಆರು ತಿಂಗಳಿನಿಂದ ಹಿಂಸಾಚಾರ ಮತ್ತು ಗಲಭೆಗಳಿಗೆ ಸಾಕ್ಷಿಯಾದ ಮಣಿಪುರ ರಾಜ್ಯಕ್ಕೆ ಹೋಗುವ ಬಗ್ಗೆ ಯೋಚಿಸುವುದಿಲ್ಲ ಎಂದು ಖರ್ಗೆ ವಾಗ್ದಾಳಿ ನಡೆಸಿದರು.

ಜನಸಂಘ, ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಹಾಗೂ ಬಿಜೆಪಿಯರ ಸಿದ್ಧಾಂತ ‘ಮಹಿಳಾ ವಿರೋಧಿ’ ಸಿದ್ಧಾಂತ. ಪಂಚಾಯಿತಿಗಳಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದೆ ಕಾಂಗ್ರೆಸ್ ಎಂದು ಖರ್ಗೆ ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago