ರಾಮನಗರ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಾಗಿ ಉಳಿದಿಲ್ಲ. ಅದೊಂದು ಮರಣ ಹೆದ್ದಾರಿಯಾಗಿ ರೂಪ ತಳೆದಿದೆ. ಆ ಕ್ರೆಡಿಟ್ ಅನ್ನು ಜಂಬ ಕೊಚ್ಚಿಕೊಳ್ಳುತ್ತಿರುವವರು ಪಡೆದುಕೊಳ್ಳಲಿ ಎಂದು ಬಿಜೆಪಿ ನಾಯಕರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 200ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 150ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯನ್ನು ಪ್ರಶ್ನಿಸಿದರು.
ನೀವು ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿರುವುದೇ ಇಷ್ಟೊಂದು ಸಾವು ಸಂಭವಿಸಲು ಕಾರಣವಾಗಿದೆ. ಇದರ ಹೊಣೆಯನ್ನು ಯಾರಾದರು ಹೊರುತ್ತಾರೆಯೇ. ಕೆಲವರು ಮಾಧ್ಯಮ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ನಾವೇ ರಸ್ತೆ ಮಾಡಿದ್ದು ಎಂದು ಜಂಬ ಕೊಚ್ಚಿಕೊಳ್ಳುತ್ತಾರೆ. ರಸ್ತೆ ನಿರ್ಮಾಣವಾಗಿದ್ದು ನಮ್ಮ ಹಣದಲ್ಲಿ. ಆದರೂ ರಸ್ತೆ ಮಾಡಿದ್ದಾಗಿ ಮಾತ್ರ ಹೇಳಿಕೊಳ್ಳುತ್ತಾರೆ. ಆ ಸಾವಿನ ಹೊಣೆ ಮಾತ್ರ ಹೊರಲ್ಲ. ಇದು ಹೈವೆಯಾಗಿ ಉಳಿದಿಲ್ಲ. ಮರಣ ಹೆದ್ದಾರಿ ಆಗಿದೆ. ಇದರ ಕ್ರೆಡಿಚ್ ಕೂಡ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ನಾಯಕರನ್ನು ಪರೋಕ್ಷವಾಗಿ ಟೀಕಿಸಿದರು.
ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸದಂತೆ ಮಾಡುವ ಹೊಣೆ ನಿಮ್ಮದು. ನೀವು ಏನು ಮಾಡುತ್ತೀರೊ ಗೊತ್ತಿಲ್ಲ. ಹೆದ್ದಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಸರ್ವಿಸ್ ರಸ್ತೆ, ತಂಗುದಾಣ, ಅಂಡರ್ ಪಾಸ್ ಸಮಸ್ಯೆ ಬಗೆಹರಿಸಬೇಕು ಎಂದು ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…