Mysore
33
clear sky

Social Media

ಮಂಗಳವಾರ, 14 ಏಪ್ರಿಲ 2026
Light
Dark

ಮೋದಿ, ಅಮಿತ್‌ ಶಾ ರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ನವದೆಹಲಿ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ವಿಜಯೇಂದ್ರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ.

ಅವರು ನನಗೆ ರಾಜ್ಯದ ಜವಾಬ್ದಾರಿ ವಹಿಸಿಕೊಟ್ಟಿರುವುದು ನನ್ನ ಸೌಭಾಗ್ಯವಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವ ಜವಾಬ್ದಾರಿ ಇದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬಳಿಕ ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿ ಮಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ, ಅಸಾಧಾರಣ ನಾಯಕ, ರಾಜಕೀಯ ಚಾಣಕ್ಯ ಎಂದು ಕರೆಯಲಾಗುತ್ತದೆ! ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿರುವ ಇತ್ತೀಚಿನ ಚುನಾವಣಾ ಫಲಿತಾಂಶಗಳಲ್ಲಿ ಭಾರಿ ಗೆಲುವಿಗಾಗಿ ಅವರನ್ನು ಅಭಿನಂದಿಸಲಾಯಿತು.

ಅವರ ಪ್ರೋತ್ಸಾಹದಾಯಕ ಮಾತುಗಳು ಮತ್ತು ನನ್ನ ಸಾಮರ್ಥ್ಯದ ಮೇಲಿನ ವಿಶ್ವಾಸವು ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಲು ಮತ್ತು ಕಾಂಗ್ರೆಸ್‌ ಮುಕ್ತ ಕರ್ನಾಟಕದ ಗುರಿಯನ್ನು ಸಾಧಿಸಲು ಮತ್ತಷ್ಟು ಕೆಲಸ ಮಾಡಲು ನನ್ನನ್ನು ಪ್ರೇರೇಪಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹಲ್ಲಾದ್‌ ಜೋಶಿ, ಸಂಸದ ಪ್ರತಾಪ್‌ ಸಿಂಹ ಸಾತ್‌ ನೀಡಿದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!