ನವದೆಹಲಿ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
ಈ ಬಗ್ಗೆ ವಿಜಯೇಂದ್ರ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ.
ಅವರು ನನಗೆ ರಾಜ್ಯದ ಜವಾಬ್ದಾರಿ ವಹಿಸಿಕೊಟ್ಟಿರುವುದು ನನ್ನ ಸೌಭಾಗ್ಯವಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವ ಜವಾಬ್ದಾರಿ ಇದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ, ಅಸಾಧಾರಣ ನಾಯಕ, ರಾಜಕೀಯ ಚಾಣಕ್ಯ ಎಂದು ಕರೆಯಲಾಗುತ್ತದೆ! ಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿರುವ ಇತ್ತೀಚಿನ ಚುನಾವಣಾ ಫಲಿತಾಂಶಗಳಲ್ಲಿ ಭಾರಿ ಗೆಲುವಿಗಾಗಿ ಅವರನ್ನು ಅಭಿನಂದಿಸಲಾಯಿತು.
ಅವರ ಪ್ರೋತ್ಸಾಹದಾಯಕ ಮಾತುಗಳು ಮತ್ತು ನನ್ನ ಸಾಮರ್ಥ್ಯದ ಮೇಲಿನ ವಿಶ್ವಾಸವು ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸಲು ಮತ್ತು ಕಾಂಗ್ರೆಸ್ ಮುಕ್ತ ಕರ್ನಾಟಕದ ಗುರಿಯನ್ನು ಸಾಧಿಸಲು ಮತ್ತಷ್ಟು ಕೆಲಸ ಮಾಡಲು ನನ್ನನ್ನು ಪ್ರೇರೇಪಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹಲ್ಲಾದ್ ಜೋಶಿ, ಸಂಸದ ಪ್ರತಾಪ್ ಸಿಂಹ ಸಾತ್ ನೀಡಿದರು
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…