ಬೆಂಗಳೂರು : ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಪ್ರಲ್ಹಾದ್ ಜೋಷಿ ಅವರು ಕೂಡಲೇ ಶೆಟ್ಟರ್ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಮದು ಅದು ಒತ್ತಾಯಿಸಿದೆ.
ಈ ಕುರಿತಂತೆ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಮಾತನಾಡಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ.
ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಜಗಜ್ಯೋತಿ ಬಸವಣ್ಣರನ್ನು ಅವಮಾನಿಸಿದ್ದೂ ಅಲ್ಲದೆ ಅಕ್ಕಮಹಾದೇವಿ ಸೇರಿದಂತೆ ಶರಣರ ವಚನಗಳನ್ನು ಪಠ್ಯದಿಂದ ಕೈಬಿಟ್ಟು ಅವಮಾನಿಸಿತ್ತು ಲಿಂಗಾಯತವಿರೋಧಿಬಿಜೆಪಿ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಸಮಾನತೆ, ಸಾಮರಸ್ಯವನ್ನು ಸಾರುವ ಲಿಂಗಾಯತ ತತ್ವವೆಂದರೆ ಬಿಜೆಪಿಗೆ ಮೊದಲಿಂದಲೂ ಅಸಹನೆ ಇದೆ. ಈಗ ಆ ಅಸಹನೆ ರಾಜಕೀಯ ನಾಯಕರ ಮೇಲೆ ತಿರುಗಿದೆ ಎಂದು ಟೀಕಿಸಿದೆ.
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…