Mysore
29
light rain

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಕರಸೇವಕರ ಬಂಧನ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: ಬಿವೈ ವಿಜಯೇಂದ್ರ

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್‌ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ಕರಸೇವಕರ ಬಂಧನವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿಕೆಯನ್ನು ನೀಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯವಾದ ಜಗನ್ನಾಥ ಭವನದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ ರಾಜ್ಯ ಕಾಂಗ್ರೆಸ್‌ ಸರ್ಕಾರ ತಾನು ಹಿಂದೂ ವಿರೋಧಿ ಎಂಬುದನ್ನು ದೇಶದ ಹಾಗೂ ರಾಜ್ಯದ ಜನತೆಗೆ ನೆನಪು ಮಾಡುತ್ತಿದೆ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಳೆಯ ಪ್ರಕರಣವನ್ನು ಮತ್ತೆ ರಿ ಓಪನ್‌ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

ಈ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ದೇಶ ಹಾಗೂ ರಾಜ್ಯದ ಜನತೆ ಸಂತಸದಲ್ಲಿದ್ದು, ದೇಶದಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇಂಥ ಸಂದರ್ಭವನ್ನು ಆರಿಸಿ ಶ್ರೀಕಾಂತ್‌ ಪೂಜಾರಿ ಅವರನ್ನು ಹಳೆ ಕೇಸ್‌ ರಿ ಓಪನ್‌ ಮಾಡುವ ಮೂಲಕ ಕಾಂಗ್ರೆಸ್‌ ತಾನು ಹಿಂದೂ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿಕೊಂಡಿದೆ ಎಂದು ಬಿ ವೈ ವಿಜಯೇಂದ್ರ ಕಿಡಿಕಾರಿದರು.

ಕಾಂಗ್ರೆಸ್‌ನ ಈ ನಡೆ ಖಂಡನೀಯ. ಹೀಗಾಗಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬುಧವಾರ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿಯೂ ಸಹ ಪ್ರತಿಭಟನೆ ನಡೆಯಲಿದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ