ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ಕರಸೇವಕರ ಬಂಧನವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿಕೆಯನ್ನು ನೀಡಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯವಾದ ಜಗನ್ನಾಥ ಭವನದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಹಿಂದೂ ವಿರೋಧಿ ಎಂಬುದನ್ನು ದೇಶದ ಹಾಗೂ ರಾಜ್ಯದ ಜನತೆಗೆ ನೆನಪು ಮಾಡುತ್ತಿದೆ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಳೆಯ ಪ್ರಕರಣವನ್ನು ಮತ್ತೆ ರಿ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
ಈ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ದೇಶ ಹಾಗೂ ರಾಜ್ಯದ ಜನತೆ ಸಂತಸದಲ್ಲಿದ್ದು, ದೇಶದಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇಂಥ ಸಂದರ್ಭವನ್ನು ಆರಿಸಿ ಶ್ರೀಕಾಂತ್ ಪೂಜಾರಿ ಅವರನ್ನು ಹಳೆ ಕೇಸ್ ರಿ ಓಪನ್ ಮಾಡುವ ಮೂಲಕ ಕಾಂಗ್ರೆಸ್ ತಾನು ಹಿಂದೂ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿಕೊಂಡಿದೆ ಎಂದು ಬಿ ವೈ ವಿಜಯೇಂದ್ರ ಕಿಡಿಕಾರಿದರು.
ಕಾಂಗ್ರೆಸ್‌ನ ಈ ನಡೆ ಖಂಡನೀಯ. ಹೀಗಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿಯೂ ಸಹ ಪ್ರತಿಭಟನೆ ನಡೆಯಲಿದೆ ಎಂದರು.
ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…