BREAKING NEWS

ಬಿಜೆಪಿ ಗೆಲುವು ಮುಖ್ಯ, ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ: ಎಸ್. ಅಂಗಾರ

ಸುಳ್ಯ (ದಕ್ಷಿಣ ಕನ್ನಡ): ಪಕ್ಷದಿಂದ ಟಿಕೆಟ್ ದೊರೆಯದಿದ್ದಾಗ ಆ ಕ್ಷಣದಲ್ಲಿ ಉದ್ವೇಗದಿಂದ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದೆ. ಆದರೆ ಈಗ ನನ್ನ ಯೋಚನೆ ಹಾಗಿಲ್ಲ. ಪಕ್ಷ ನನಗೆ ಸಾಕಷ್ಟು ಅವಕಾಶ ಕೊಟ್ಟಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಶಾಸಕ ಎಸ್. ಅಂಗಾರ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲುವು ಮುಖ್ಯ. ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿ ಭಾಗೀರಥಿ ಮುರುಳ್ಯ ಗೆಲುವಿಗೆ ಶ್ರಮಿಸುತ್ತೇನೆ ಮತ್ತು ಗೆಲುವಿನ ಜವಬ್ಧಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ’ ಎಂದರು.

ಸುಳ್ಯ ಮೀಸಲು ಕ್ಷೇತ್ರದಿಂದ ಆರು ಬಾರಿ ಆಯ್ಕೆಯಾಗಿದ್ದ ಅಂಗಾರ ಅವರು, ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ‘ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಾನು ಇನ್ನು ರಾಜಕಾರಣದಲ್ಲೂ ಇಲ್ಲ, ಚುನಾವಣಾ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು’ ಎಂದು ಹೇಳಿದ್ದರು. ಈ ಹೇಳಿಕೆ ಬಿಜೆಪಿ ವಲಯದಲ್ಲಿ ವ್ಯಾಪಕ ಟೀಕೆಗೆ ಒಳಗಾಗಿತ್ತು.

andolanait

Recent Posts

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

1 hour ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

2 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

3 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

4 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

4 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

5 hours ago