ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಎಲ್ಕೆ ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡು ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಟ್ವೀಟ್: ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಣಾರ್ಥವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು.
ಅವರು ನಮ್ಮ ಗೃಹ ಮಂತ್ರಿ ಮತ್ತು I&B ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ ಎಂದು ಪ್ರಧಾನಿ ಮೋದಿ ತಮ್ಮ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಹ ಭಾರತ ರತ್ನ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಅವರ ಸಮಕಾಲೀನ ರಾಜಕೀಯ ಹಿರಿಯ ಮುತ್ಸದಿ ಅಡ್ವಾಣಿ ಅವರು ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.