BREAKING NEWS

ಬಿಜೆಪಿಯ ಭೀಷ್ಮ ಎಲ್​​ಕೆ ಅಡ್ವಾಣಿಗೆ ಭಾರತ ರತ್ನ ಘೋಷಣೆ

ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಎಲ್​​ಕೆ ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡು ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್‌: ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಣಾರ್ಥವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು.

ಅವರು ನಮ್ಮ ಗೃಹ ಮಂತ್ರಿ ಮತ್ತು I&B ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ ಎಂದು ಪ್ರಧಾನಿ ಮೋದಿ ತಮ್ಮ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಹ ಭಾರತ ರತ್ನ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಅವರ ಸಮಕಾಲೀನ ರಾಜಕೀಯ ಹಿರಿಯ ಮುತ್ಸದಿ ಅಡ್ವಾಣಿ ಅವರು ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

3 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

4 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

4 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

4 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

4 hours ago