BREAKING NEWS

ಬಿಜೆಪಿಯ ಭ್ರಷ್ಟಾಚಾರ ಪರಶುರಾಮನನ್ನೂ ಬಿಡಲಿಲ್ಲ: ಪೋಸ್ಟರ್‌ ಹಂಚಿಕೊಂಡ ಕಾಂಗ್ರೆಸ್‌

ಬೆಂಗಳೂರು : ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅಲ್ಲಿನ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಹಾಗು ಬಿಜೆಪಿ ಪಾಲಿಗೆ ದೊಡ್ಡ ಮುಜುಗರವಾಗಿ ಮಾರ್ಪಟ್ಟಿದೆ. ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಿಸಿದ ಪರಶುರಾಮನ ಪ್ರತಿಮೆಯೇ ನಾಪತ್ತೆಯಾಗಿದ್ದು, ಇದೀಗ ಕಾರ್ಕಳದ ಬಿಜೆಪಿ ಶಾಸಕ ಸುನಿಲ್‌ ಕುಮಾರ್ ಕೂಡ ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಸಂಬಂಧ ಬಿಜೆಪಿ ಶಾಸಕ ಸುನಿಲ್‌ ಕುಮಾರ್ ಅವರ ಭಾವಚಿತ್ರವುಳ್ಳ ಪೋಸ್ಟರ್‌ ಅನ್ನು ಹಂಚಿಕೊಂಡಿರುವ ಕಾಂಗ್ರೆಸ್‌, ʼʼಫೈಬರ್ ಮೂರ್ತಿಯನ್ನು ಕಂಚು ಎಂದು ಇಡೀ ಕರ್ನಾಟಕದ ಜನರ ಕಿವಿ ಮೇಲೆ ಫ್ಲವರ್ ಇಟ್ಟುರುವ ಬಿಜೆಪಿ ತಾನು ಲೂಟಿ ಹೊಡೆಯಲು ಯಾವ ಕೆಳ ಮಟ್ಟಕ್ಕೆ ಬೇಕಿದ್ದರೂ ಇಳಿಯಬಲ್ಲದು ಎಂದು ತೋರಿಸಿಕೊಟ್ಟಿದೆʼʼ ಎಂದು ಕಿಡಿಕಾರಿದೆ.

ʼʼಮೂರ್ತಿಯಲ್ಲಿ ಕಂಚನ್ನು ಹಾಗೂ ಶಾಸಕರನ್ನು ಹುಡುಕಿದವರಿಗೆ ಸೂಕ್ತ ಬಹುಮಾನವಿದೆʼʼ ಎಂದು ಪೋಸ್ಟರ್‌ ನಲ್ಲಿ ಉಲ್ಲೇಖಿಸಲಾಗಿದೆ.

ʼʼಫೈಬರ್ ಪ್ರತಿಮೆ ತೋರಿಸಿ ಕಂಚು ಎಂದರೆ ಒಪ್ಪಲಾಗದುʼʼ

ʼʼಬಿಜೆಪಿಯ ಭ್ರಷ್ಟಾಚಾರ ಪರಶುರಾಮನನ್ನೂ ಬಿಡಲಿಲ್ಲ, ಧರ್ಮ ದ್ರೋಹಿ ಬಿಜೆಪಿ ಸರಕಾರ 14 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಪರಶುರಾಮನ ಮೂರ್ತಿ ಕಾಣೆಯಾಗಿದೆ! “ಕಂಚಿನ“ ಪ್ರತಿಮೆ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಆದರೆ, ವಿಶೇಷ ಸೂಚನೆ ಏನೆಂದರೆ ʼʼಫೈಬರ್ ಪ್ರತಿಮೆ ತೋರಿಸಿ ಕಂಚು ಎಂದರೆ ಒಪ್ಪಲಾಗದುʼʼ ಎಂದು ಕಾಂಗ್ರೆಸ್‌ ಕಾಲೆಳೆದಿದೆ.

https://x.com/INCKarnataka/status/1715663516282007663?s=20

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

13 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

13 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

17 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

22 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

22 hours ago