ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಮತೀಯ ಹಿಂಸಾಚಾರದ ಬಗ್ಗೆ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದ್ವೇಷದ ರಾಜಕಾರಣವು ಈಶಾನ್ಯ ರಾಜ್ಯವನ್ನು ಸುಟ್ಟುಹಾಕಿದೆ ಮತ್ತು ಹಲವಾರು ಜನರನ್ನು ಬಲಿತೆಗೆದುಕೊಂಡಿದೆ ಎಂದು ಆರೋಪಿಸಿದ್ದಾರೆ.
“ಈ ‘ನಫ್ರತ್ ಕಾ ಬಜಾರ್’ ಅನ್ನು ಮುಚ್ಚೋಣ ಮತ್ತು ಮಣಿಪುರದ ಪ್ರತಿ ಹೃದಯದಲ್ಲಿ ‘ಮೊಹಬ್ಬತ್ ಕಿ ದುಕಾನ್’ ಅನ್ನು ತೆರೆಯೋಣ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು ವಿಫಲಗೊಳಿಸಿದ್ದಾರೆ ಎಂದು ಆರೋಪಿಸಿದ ಗಾಂಧಿ ಮತ್ತು ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಸರ್ವಪಕ್ಷಗಳ ನಿಯೋಗವನ್ನು ಮಣಿಪುರಕ್ಕೆ ಕಳುಹಿಸಲು ಒತ್ತಾಯಿಸಿ, ಮಣಿಪುರದಲ್ಲಿ ಉದ್ವಿಗ್ನತೆಯ ಬಗ್ಗೆ ಮೌನವಾಗಿರುವುದನ್ನು ಪ್ರಶ್ನಿಸಿದ್ದಾರೆ.
“ಬಿಜೆಪಿಯ ದ್ವೇಷದ ರಾಜಕಾರಣವು ಮಣಿಪುರವನ್ನು 40 ದಿನಗಳಿಗೂ ಹೆಚ್ಚು ಕಾಲ ಸುಟ್ಟುಹಾಕಿದ್ದು, ನೂರಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿದೆ. ಪ್ರಧಾನಿ ಭಾರತವನ್ನು ವಿಫಲಗೊಳಿಸಿದ್ದಾರೆ ಮತ್ತು ಸಂಪೂರ್ಣವಾಗಿ ಮೌನವಾಗಿದ್ದಾರೆ ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…