BREAKING NEWS

ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಂಡಾಯವೆದ್ದು ಧಾರವಾಡ ಗ್ರಾಮೀಣ-71 ರ ವಿಧಾನಸಭಾ ಮತಕ್ಷೇತ್ರಕ್ಕೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ತವನಪ್ಪ ಅಷ್ಟಗಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಕ್ಷೇತ್ರದಲ್ಲಿ ಹೊಸ ಸಂಚಲನ ‌ಸೃಷ್ಠಿಸಿದ್ದಾರೆ.

ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಬಿಜೆಪಿ ವರಿಷ್ಠರು ಮಣೆ ಹಾಕದೇ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಈ ಸಲವೂ ಟಿಕೆಟ್ ನೀಡಿದ್ದರಿಂದ ಅಷ್ಟಗಿ ಮುನಿಸಿಕೊಂಡಿದ್ದರು.

ಇದಲ್ಲದೇ ನಿಗಮ ಮಂಡಳಿ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದರ ಜತೆಗೆ ಬಂಡಾಯವೆದ್ದು ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದರು. ಇದೀಗ ಭಾನುವಾರ ಹೊಸ ಬೆಳವಣಿಗೆಯಲ್ಲಿ ತವನಪ್ಪ ಅಷ್ಟಗಿ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಒಂದು ಬಾರಿ ತವನಪ್ಪ ಅಷ್ಟಗಿ ಮತ್ತು ಅವರ ಪತ್ನಿ ಕಸ್ತೂರಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಕ್ಷೇತ್ರದಲ್ಲಿ ತಮ್ಮದೇ ಆದ ಬೆಂಬಲಿಗರ ಪಡೆಯನ್ನು ಹೊಂದಿರುವ ಅಷ್ಟಗಿಯವರು ಇದೀಗ ಕಾಂಗ್ರೆಸ್ ಕೈ ಹಿಡಿದಿದದ್ದು ಗ್ರಾಮೀಣದಲ್ಲಿ ಇದರಿಂದ ಬಿಜೆಪಿಗೆ ತೀವ್ರ ಹಿನ್ನಡೆಯಾದಂತಾಗಿದೆ.

ಜಾರಕಿಹೊಳಿ ರಂಗ ಪ್ರವೇಶ : ಇಲ್ಲಿಯ ಸವದತ್ತಿ ರಸ್ತೆಯಲ್ಲಿರುವ ತವನಪ್ಪ ಅಷ್ಟಗಿ ಅವರ ನಿವಾಸಕ್ಕೆ ಭಾನುವಾರ ಬೆಳಿಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ವಿನಯ ಕುಲಕರ್ಣಿ ಸಹೋದರ, ಕಾಂಗ್ರೆಸ್ ಮುಖಂಡ ವಿಜಯ ಕುಲಕರ್ಣಿ ಅವರು ಬೇಟಿ ನೀಡಿದರು. ಈ ವೇಳೆ ಮಾತುಕತೆ ನಡೆಸಿ, ಅಷ್ಟಗಿ ಅವರ ಮನವೊಲಿಸುವ ಕೆಲಸ ಮಾಡಿದರು. ಇದಾದ ಬಳಿಕ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ ಜಾರಕಿಹೊಳಿ, ವರಿಷ್ಠರ ಸೂಚನೆ ಮೇರೆಗೆ ನಾನು ತವನಪ್ಪ ಅವರ ಮನೆಗೆ ಬಂದಿದ್ದೆ. ಇನ್ನು ಮುಂದೆ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಇದು ಒಳ್ಳೆಯ ಬೆಳವಣಿಗೆ. ಮೊದಲು ನಾವೇ ಅಷ್ಟಗಿ ಅವರನ್ನು ಸಂಪರ್ಕ ಮಾಡಿದ್ದೆವು. ಈಗ ನಾವು ಬಂದು ವಿನಂತಿ ಮಾಡಿದ್ದಕ್ಕೆ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅಷ್ಟಗಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಪರಿಣಾಮ ಕ್ಷೇತ್ರದ ಜತೆಗೆ ಬೇರೆ ಕಡೆಯೂ ಆಗಲಿದೆ. ತವನಪ್ಪ ಸಣ್ಣ ಸಮಾಜದವರಾದರೂ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿದ ತವನಪ್ಪ ಅಷ್ಟಗಿ, ಬಿಜೆಪಿಯಲ್ಲಿ ನಮಗೆ ಸಾಮಾಜಿಕ ನ್ಯಾಯ ಸಿಗಲಿಲ್ಲ. ನಮ್ಮ ಗೌರವಕ್ಕೆ ಧಕ್ಕೆ ಬರುವ ಕೆಲಸವನ್ನು ಹಾಲಿ ಶಾಸಕ ಅಮೃತ ದೇಸಾಯಿ ಮಾಡಿದರು. ಆರು ಬಾರಿ ಸೋತವರನ್ನು ನಾವು ಶಾಸಕರನ್ನಾಗಿ ಮಾಡಿದೇವು. ತನು, ಮನ, ಧನದಿಂದ ಕಾರ್ಯಕರ್ತರೆಲ್ಲ ಸೇರಿ ಅವರನ್ನು ಆಯ್ಕೆ ಮಾಡಿದ್ದೆವು. ಆದರೆ, ಅಮೃತ ದೇಸಾಯಿ ಕಾರ್ಯಕರ್ತರನ್ನೂ ಕಡೆಗಣಿಸಿದರು ಎಂದು ದೂರಿದರು.

ಬಿಜೆಪಿಯಲ್ಲಿ ಒಂದು ವಿಶ್ವಾಸ ಮೇಲೆ ಇದ್ದೆ. ಆದರೆ, ಅಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ. ಇದೀಗ ಸತೀಶ ಜಾರಕಿಹೊಳಿ ಅವರು ನಮ್ಮ ಮನೆಗೆ ಬಂದು ಮನವೊಲಿಸಿ, ನಮಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರಿಂದ ನಾನು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಸೋಮವಾರ ನಾಮಪತ್ರ ವಾಪಸ್ ಪಡೆಯುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ ನ್ಯಾಯದ ವಿಶ್ವಾಸದಿಂದ ಕಾಂಗ್ರೆಸ್ ಸೇರಿದ್ದೇನೆ. ಯಾವುದೇ ಷರತ್ತು ವಿಽಸಿಲ್ಲ. ಗೌರವ ಬಯಸಿ, ಬಂದಿದ್ದೇನೆ. ಮೊದಲು ನಾನು ಕಾಂಗ್ರೆಸ್‌ನಲ್ಲೇ ಇದ್ದೆ. ಆ ಬಳಿಕ ಕೆಜೆಪಿ, ಬಿಜೆಪಿ ಸೇರ್ಪಡೆಗೊಂಡಿದ್ದೆ. ಈಗ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ.
-ತವನಪ್ಪ ಅಷ್ಟಗಿ

ಬಿಜೆಪಿ ಪಕ್ಷವನ್ನು ತೊರೆದು ತವನಪ್ಪ ಅಷ್ಟಗಿ ಅಽಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಅವರ ಶಕ್ತಿಗನುಗುಣವಾಗಿ ಅವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಲಾಗುವುದು. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವ ಅವರು ಸೋಮವಾರ ಅದನ್ನು ವಾಪಸ್ ಪಡೆದು ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಲ್ಲುತ್ತಾರೆ.
-ಸತೀಶ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ

ಅಷ್ಟಗಿಗೆ ಬೆಲ್ಲದ ಟಾಂಗ್
ತವನಪ್ಪ ಅಷ್ಟಗಿ ಮೂಲತ: ವ್ಯಾಪಾರಿಯಾಗಿದ್ದು, ಲಾಭದ ಆಸೆಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಆದರೆ ಅವರು ಅಲ್ಲಿ ನಷ್ಟವನ್ನೇ ಅನುಭವಿಸಲಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷ, ಅದರ ನಾಯಕ ಅವರೊಂದಿಗೆ ಹಾಗೂ ಅವರ ಪತ್ನಿ ಜತೆಗೆ ಯಾವ ರೀತಿ ನಡೆದುಕೊಂಡಿತ್ತು ಎಂಬುದನ್ನು ಮರೆತಿದ್ದಾರೆ ಅಷ್ಟಗಿ. ಸ್ವಾಭಿಮಾನಿಯಾಗಿದ್ದರೆ ಎಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿರಲಿಲ್ಲ. ಅವರಿಗೆ ತತ್ವ, ಸಿದ್ದಾಂತವಿಲ್ಲ.
-ಅರವಿಂದ ಬೆಲ್ಲದ, ಶಾಸಕ

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

1 hour ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

8 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

8 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

8 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

8 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

8 hours ago