BREAKING NEWS

ಕರ್ನಾಟಕದಲ್ಲಿ ರಕ್ತ ರಾಜಕೀಯ : 100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ತಾರೆ, ರಕ್ತದಲ್ಲಿ ಪತ್ರ ಬರೆದು ಯಡಿಯೂರಪ್ಪಗೆ ಟಾಂಗ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಅಖಾಡದಲ್ಲಿ ರಾಜಕೀಯ ನಾಯಕರ ಮಾತಿಗೆ ಮಾತು, ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ಇದೀಗ ರಾಜ್ಯ ರಾಜಕಾರಣದಲ್ಲಿ ರಕ್ತ ರಾಜಕೀಯ ಶುರುವಾಗಿದೆ. ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುರು ಮಾಡಿದ ರಕ್ತ ಹೇಳಿಕೆ ಇದೀಗ ಇನ್ನುಳಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ನಾಯಕರು ರಕ್ತದ ಬಗ್ಗೆ ಮಾತನಾಡುತ್ತಿದ್ದಾರೆ. ರಕ್ತ ಮಾತಿಗೆ ರಕ್ತಪತ್ರವೊಂದು ಸೇರಿಕೊಂಡಿದೆ.

ಹೌದು,ರಾಜ್ಯದಲ್ಲಿ ರಕ್ತದಲ್ಲಿ ಪತ್ರ ಬರೆಯೋ ರಾಜಕಾರಣ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಯುವ ಮುಖಂಡರೊಬ್ಬರು ರಕ್ತ ಪತ್ರ ಬರೆದಿದ್ದಾರೆ. ಜಗದೀಶ್ ಶೆಟ್ಟರ್ ಗೆಲ್ಲುವುದಿಲ್ಲ‌ ಎಂದು ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿದ್ದ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಲಿಂಗಾಯತ ಯುವ ಮುಖಂಡ ಮಂಜುನಾಥ ಯಂಟ್ರುವಿ ಎನ್ನುವರು ರಕ್ತದಲ್ಲೇ ಪತ್ರ ಬರೆದು ತಿರುಗೇಟು ನೀಡಿದ್ದು, ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್​ ಗೆಲ್ಲಲಿದ್ದಾರೆ ಎಂದು ರಕ್ತದಲ್ಲಿ ಬರೆದ ಪತ್ರದ ಪೋಟೋಗಳು ವೈರಲ್ ಆಗುತ್ತಿವೆ.

ಪತ್ರದಲ್ಲಿ ಮಾನ್ಯ ಜಗದೀಶ ಶೆಟ್ಟರ್ 100ಕ್ಕೆ 100ರಷ್ಟು ವಿಜಯಶಾಲಿ ಆಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ, ಈ ಸಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜೈ ಕಾಂಗ್ರೆಸ್ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಯಡಿಯೂರಪ್ಪನವರ ಹೇಳಿಕೆಗೆ ಟಾಂಗ್ ತಿರುಗೇಟು ಕೊಟ್ಟಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಂಜುನಾಥ ಯಂಟ್ರೂವಿ, ಒಬ್ಬ ಲಿಂಗಾಯತ ನಾಯಕರ ಮೇಲೆ ಲಿಂಗಾಯತ ನಾಯಕರನ್ನೇ ಎತ್ತಿ ಕಟ್ಟಲಾಗುತ್ತಿದೆ. ರಕ್ತದಲ್ಲಿ ಬರೆದು ಕೊಡ್ತೇನೆ ಶೆಟ್ಟರ್ ಸೋಲುವುದು ಖಚಿತ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದ್ರೆ ನಾನು ರಕ್ತದಲ್ಲಿ ಬರೆದುಕೊಡ್ತೀನಿ ಯಾವುದೇ ಕಾರಣಕ್ಕೂ ಶೆಟ್ಟರ್ ಅವರು ಸೋಲುವುದಿಲ್ಲ. ಶೆಟ್ಟರ್ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ. ರಾಜಕೀಯ ನಾಯಕರ ಮಾತುಗಳನ್ನ ನಾನು‌ ಕೃತಿಯಲ್ಲಿ ತೋರಿಸುತ್ತೇನೆ ಎಂದಿದ್ದಾರೆ.

lokesh

Recent Posts

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

28 mins ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

37 mins ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

42 mins ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

45 mins ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

48 mins ago

ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್‌ ಗೌಡ ಅರೆಸ್ಟ್‌

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…

1 hour ago