ಮುಂಬೈ: ನಟ, ಮಾಡೆಲ್ ಆಗಿ ಬಾಲಿವುಡ್ ನಲ್ಲಿ ಗುರುತಿಸಿಕೊಂಡಿದ್ದ ಆದಿತ್ಯ ಸಿಂಗ್ ರಜಪೂತ್ ತಮ್ಮ ಮನೆಯ ವಾಶ್ ರೂಮ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಮಧ್ಯಾಹ್ನ(ಮೇ.22) ಜನಪ್ರಿಯ ನಟ, ಮಾಡೆಲ್ ಮತ್ತು ಕಾಸ್ಟಿಂಗ್ ಸಂಯೋಜಕರಾಗಿದ್ದ ಆದಿತ್ಯ ಸಿಂಗ್ ರಜಪೂತ್ ಅಂಧೇರಿಯಲ್ಲಿರುವ ತಮ್ಮ ನಿವಾಸದ ವಾಶ್ ರೂಮ್ ಶವವಾಗಿ ಪತ್ತೆಯಾಗಿದ್ದಾರೆ.
ನಟನ ಸ್ನೇಹಿತ ಹಾಗೂ ಕಟ್ಟಡದ ಸೆಕ್ಯೂರಿಟಿ ಗಾರ್ಡ್, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಅಧಿಕ ಪ್ರಮಾಣದಲ್ಲಿ ಡ್ರಗ್ ಸೇವಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಕಳೆದ ರಾತ್ರಿ ಸ್ನೇಹಿತರೊಂದಿಗೆ ಇರುವ ಬಗ್ಗೆ ನಟ ಇನ್ಸ್ಟಾಗ್ರಾಮ್ ನಲ್ಲಿ ಸ್ಟೋರಿಯನ್ನು ಹಾಕಿದ್ದರು.
ಆದಿತ್ಯ ಸಿಂಗ್ ರಜಪೂತ್ ಮಾಡೆಲ್, ನಟನಾಗಿ ಗುರುತಿಸಿಕೊಂಡಿದ್ದರು. ನಟರೊಂದಿಗೆ ಅನೇಕ ಬ್ರ್ಯಾಂಡ್‌ಗಳಿಗೆ ಕೆಲಸ ಮಾಡಿದ್ದರು.
ʼಕ್ರಾಂತಿವೀರ್ ʼ, ʼಮೈನೆ ಗಾಂಧಿ ಕೋ ನಹಿಂ ಮಾರಾʼ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಅವರು, 300 ಕ್ಕೂ ಹೆಚ್ಚಿನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಶೋ ʼ Splitsvilla-9ʼ ರಲ್ಲಿ ಭಾಗವಹಿಸಿದ್ದರು. ʼಲವ್ʼ, ʼಆಶಿಕಿʼ, ʼಕೋಡ್ ರೆಡ್ʼ, ʼಆವಾಜ್ ಸೀಸನ್ 9ʼ, ʼಬ್ಯಾಡ್ ಬಾಯ್ ಸೀಸನ್ 4ʼ ಮತ್ತು ಇತರ ಟಿವಿ ಶೋಗಳಲ್ಲಿ ಭಾಗಿಯಾಗಿದ್ದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…