BREAKING NEWS

ಮನೆಯ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾದ ಬಾಲಿವುಡ್‌ ನಟ

ಮುಂಬೈ: ನಟ, ಮಾಡೆಲ್‌ ಆಗಿ ಬಾಲಿವುಡ್‌ ನಲ್ಲಿ ಗುರುತಿಸಿಕೊಂಡಿದ್ದ ಆದಿತ್ಯ ಸಿಂಗ್ ರಜಪೂತ್ ತಮ್ಮ ಮನೆಯ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ಮಧ್ಯಾಹ್ನ(ಮೇ.22) ಜನಪ್ರಿಯ ನಟ, ಮಾಡೆಲ್ ಮತ್ತು ಕಾಸ್ಟಿಂಗ್ ಸಂಯೋಜಕರಾಗಿದ್ದ ಆದಿತ್ಯ ಸಿಂಗ್ ರಜಪೂತ್  ಅಂಧೇರಿಯಲ್ಲಿರುವ ತಮ್ಮ ನಿವಾಸದ ವಾಶ್‌ ರೂಮ್‌ ಶವವಾಗಿ ಪತ್ತೆಯಾಗಿದ್ದಾರೆ.

ನಟನ ಸ್ನೇಹಿತ ಹಾಗೂ‌ ಕಟ್ಟಡದ ಸೆಕ್ಯೂರಿಟಿ ಗಾರ್ಡ್‌, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಅಧಿಕ ಪ್ರಮಾಣದಲ್ಲಿ ಡ್ರಗ್‌ ಸೇವಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಕಳೆದ ರಾತ್ರಿ ಸ್ನೇಹಿತರೊಂದಿಗೆ  ಇರುವ ಬಗ್ಗೆ ನಟ ಇನ್ಸ್ಟಾಗ್ರಾಮ್‌ ನಲ್ಲಿ ಸ್ಟೋರಿಯನ್ನು ಹಾಕಿದ್ದರು.

ಆದಿತ್ಯ ಸಿಂಗ್ ರಜಪೂತ್ ಮಾಡೆಲ್, ನಟನಾಗಿ ಗುರುತಿಸಿಕೊಂಡಿದ್ದರು. ನಟರೊಂದಿಗೆ ಅನೇಕ ಬ್ರ್ಯಾಂಡ್‌ಗಳಿಗೆ ಕೆಲಸ ಮಾಡಿದ್ದರು.

ʼಕ್ರಾಂತಿವೀರ್ ʼ, ʼಮೈನೆ ಗಾಂಧಿ ಕೋ ನಹಿಂ ಮಾರಾʼ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಅವರು, 300 ಕ್ಕೂ  ಹೆಚ್ಚಿನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಶೋ ʼ Splitsvilla-9ʼ ರಲ್ಲಿ ಭಾಗವಹಿಸಿದ್ದರು. ʼಲವ್ʼ, ʼಆಶಿಕಿʼ, ʼಕೋಡ್ ರೆಡ್ʼ, ʼಆವಾಜ್ ಸೀಸನ್ 9ʼ, ʼಬ್ಯಾಡ್ ಬಾಯ್ ಸೀಸನ್ 4ʼ ಮತ್ತು ಇತರ ಟಿವಿ ಶೋಗಳಲ್ಲಿ ಭಾಗಿಯಾಗಿದ್ದರು.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago