ಬೆಂಗಳೂರು: ಇಲ್ಲಿನ ಕುಂದಲಹಳ್ಳಿಯ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ (ಶುಕ್ರವಾರ) ಸಂಭವಿಸಿದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮದ್ಯಾಹ್ನ ಊಟದ ಸಮಯದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಸ್ಫೋಟ ಪ್ರಕರಣದಲ್ಲಿ ಒಂಭತ್ತು ಮಂದಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ.
ಸ್ಫೋಟ ಪ್ರಕರಣ ಬೆಳಕಿಗೆ ಬಂದಂತೆ ತಕ್ಷಣ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ರಾತ್ರಿಯಿಡಿ ತೀವ್ರ ತಪಾಸಣೆ ನಡೆಸಿದ್ದಾರೆ. ತಮಗೆ ಸಿಕ್ಕ ಎಲ್ಲಾ ಮಾಹಿತಿಗಳನ್ನು ಕೆಲಹಾಕಿ, ಅದರ ಜಾಡು ಹಿಡಿದು, ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಮದ್ಯಾಹ್ನ 1 ಗಂಟೆಗೆ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸದ್ಯ ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರಿಗೆ ತೆರಳಿದ ನಂತರ ತಮ್ಮ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ. ಇದರಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್, ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿ, ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.
ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…
ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…
ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ ಭೇರ್ಯ: ಭೇರ್ಯ ಗ್ರಾಮದ…
ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…
ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…