ಗುವಾಹಟಿ: ಚೀನಾಕ್ಕೆ ಹೊಂದಿಕೊಂಡಿರುವ ಗಡಿಯಲ್ಲಿ ನಿಯೋಜನೆಗೊಂಡಿರುವ ಸೇನೆಯ ಅಧಿಕಾರಿಗಳು ಹಾಗೂ ಸೈನಿಕರು ಇನ್ನು ಮುಂದೆ ಚೀನಿ ಭಾಷೆಯನ್ನು ಕಲಿಯಲಿದ್ದಾರೆ.
ಚೀನಾ ಯೋಧರೊಂದಿಗೆ ಸಮರ್ಪಕ ಸಂವಹನ ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸೇನೆ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸಂಬಂಧ, ತೇಜ್‌ಪುರ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ಎನ್.ಸಿಂಗ್ ಸಮ್ಮುಖದಲ್ಲಿ ತೇಜ್‌ಪುರದಲ್ಲಿರುವ ಸೇನೆಯ ತುಕಡಿಗಳ ಮುಖ್ಯಸ್ಥರು ಹಾಗೂ ವಿ.ವಿ. ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.
‘ಚೀನಿ ಭಾಷೆ ಕಲಿಸುವ ಈ ಕೋರ್ಸ್ 16 ವಾರಗಳ ಅವಧಿಯದ್ದು. ಚೀನಾ ಯೋಧರೊಂದಿಗಿನ ಸಂವಹನ ಉತ್ತಮಗೊಳಿಸಲು ಹಾಗೂ ಕಮಾಂಡರ್‌ಗಳ ಮಟ್ಟದ ಸಭೆಗಳು, ಜಂಟಿ ತಾಲೀಮುಗಳು ನಡೆದ ಸಂದರ್ಭದಲ್ಲಿ ಇದು ನೆರವಾಗಲಿದೆ’ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…