BREAKING NEWS

ಸಿಕೆ ಪಾಳ್ಯದಲ್ಲಿ ವಾಟರ್ ಟ್ರ್ಯಾಕ್ಟರ್ ಹರಿದು ಬಾಲಕ ಸಾವು

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ವಾಟರ್ ಟ್ರ್ಯಾಕ್ಟರ್ ಹರಿದು ಭುವನ್ ಎಂಬ ನಾಲ್ಕು ವರ್ಷ ವಯಸ್ಸಿನ ಬಾಲಕ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಅಣ್ಣನ ಜತೆ ಐಸ್​ಕ್ರೀಸ್​ ಕೊಳ್ಳಲು ಬೇಕರಿಗೆ ಬಂದಿದ್ದ ಭುವನ್​ ಮೇಲೆ ಟ್ರ್ಯಾಕ್ಟರ್ ಚಲಿಸಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಟರ್ ಟ್ಯಾಂಕರ್ ಚಲಾಯಿಸುತ್ತಿದ್ದ ಎನ್ನಲಾಗಿದೆ.

ವಾಟರ್ ಟ್ರ್ಯಾಕ್ಟರ್​​ ಭುವನ್ ತಲೆ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಗಾಯಾಳು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಂತರ ವಾಟರ್ ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಭುವನ್ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ಇತ್ತೀಚೆಗಷ್ಟೇ ಸಂಭವಿಸಿತ್ತು. ಇದರ ಕಹಿ ನೆನಪು ಮಾಸುವ ಮುನ್ನವೇ ಇದೀಗ ಟ್ರ್ಯಾಕ್ಟರ್​ ಚಾಲಕನ ಬೇಜವಾಬ್ದಾರಿ, ಅಜಾಗರೂಕತೆಯ ಚಾಲನೆಯಿಂದ ಬಾಲಕ ಮೃತಪಟ್ಟಿದ್ದಾನೆ.

lokesh

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

1 hour ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

1 hour ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

3 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

3 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

3 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

4 hours ago