ಮಧ್ಯಪ್ರದೇಶ : ಮೊರೆನಾ ಜಿಲ್ಲೆಯ ಬನ್‌ಮೋರ್ ನಗರದಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿದ್ದ ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಸಾವಿಗೀಡಾಗಿದ್ದಾರೆ. ಕೆಲವರು ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ ಎಂದು ಶಂಕಿಸಲಾಗಿದೆ. ದೀಪಾವಳಿಗೆ ಮುಂಚಿತವಾಗಿ ಗೋಡೌನ್ ಪಟಾಕಿಗಳಿಂದ ತುಂಬಿದ್ದು, ಸ್ಫೋಟದಲ್ಲಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳನ್ನು ತೆರವುಗೊಳಿಸಲು ಯಂತ್ರಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ ರಾಜೇಶ್ ಚಾವ್ಲಾ ತಿಳಿಸಿದ್ದಾರೆ.





