ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ಹಿಂತೆಗೆತವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.
ಆರ್ಟಿಕಲ್ 370 ನ್ನು ರದ್ದುಗೊಳಿಸಿರುವುದು ಸಂವಿಧಾನಾತ್ಮಕವಾಗಿ ಕ್ರಮಬದ್ಧವಾಗಿದೆಯೋ ಇಲ್ಲವೋ ಎಂಬ ಪ್ರಶ್ನೆ ತನ್ನ ಮುಂದಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಆರ್ಟಿಕಲ್ 370 ಕುರಿತು ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತ ಸಾಂವಿಧಾನಿಕ ಪ್ರಜಾಪ್ರಭುತ್ವವಾಗಿದ್ದು, ಜನರ ಅಭಿಪ್ರಾಯಗಳನ್ನು ಸ್ಥಾಪಿತ ಸಂಸ್ಥೆಗಳ ಮೂಲಕವಷ್ಟೇ ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಕೋರ್ಟ್ ಹೇಳಿದೆ.
ಆರ್ಟಿಕಲ್ 370 ರದ್ದುಗೊಳಿಸಿರುವ ಕ್ರಮ ಬ್ರೆಕ್ಸಿಟ್ ಮಾದರಿಯ ರಾಜಕೀಯ ನಡೆಯಾಗಿದೆ, ಬ್ರೆಕ್ಸಿಟ್ ನಲ್ಲಿ ಬ್ರಿಟೀಷ್ ಪ್ರಜೆಗಳ ಅಭಿಪ್ರಾಯವನ್ನು ಜನಾಭಿಪ್ರಾಯ ಸಂಗ್ರಹದ ಮೂಲಕ ಪಡೆಯಲಾಗಿತ್ತು ಎಂದು ವಾದ ಮಾಡುವಾಗ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…