ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬೈಸಾಖಿ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇತುವೆ ಕುಸಿದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬೈಸಾಖಿ ಆಚರಣೆಯ ಸಂದರ್ಭದಲ್ಲಿ ಚೆನಾನಿ ಬ್ಲಾಕ್‌ನ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ನಡೆದಿದೆ.
ಘಟನೆಯಲ್ಲಿ ಮಕ್ಕಳು ಸೇರಿದಂತೆ ಮಹಿಳೆಯರು ಗಾಯಗೊಂಡಿದ್ದಾರೆ. ಸೇತುವೆ ಕುಸಿದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಸೇತುವೆ ಮೇಲೆ ಹೆಚ್ಚು ಜನ ನಿಂತುಕೊಂಡಿದ್ದರಿಂದ ಭಾರ ಹೆಚ್ಚಾಗಿ ಸೇತುವೆ ಕುಸಿದಿದೆ ಎಂದು ಜಮ್ಮುವಿನ ವಿಭಾಗೀಯ ಆಯುಕ್ತ ರಮೇಶ್ ಕುಮಾರ್ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಸೇರಿದಂತೆ ವಿಪತ್ತು ನಿರ್ವಹಣಾ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.