BREAKING NEWS

7 ಶಿಶುಗಳನ್ನು ಹತ್ಯೆ ಮಾಡಿದ್ದ ಬ್ರಿಟಿಷ್‌ ನರ್ಸ್‌ಗೆ ಜೀವಾವಧಿ ಶಿಕ್ಷೆ

ಲಂಡನ್ : ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನು ಹತ್ಯೆಗೈದು, ಇನ್ನೂ 6 ಶಿಶುಗಳನ್ನ ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್‌ಗೆ ಇಂಗ್ಲೆಂಡಿನ ಮ್ಯಾಂಚೆಸ್ಟರ್‌ ಕ್ರೌನ್‌ ಕೋರ್ಟ್‌ (ಕ್ರೌನ್ ಪ್ರಾಸಿಕ್ಯೂಷನ್ ಸೇವೆ) ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆ ಇನ್ನು ಸಾಯುವವರೆಗೂ ಜೈಲಿನಲ್ಲೇ ಕೊಳೆಯಬೇಕು, ಇನ್ನೆಂದಿಗೂ ಬಿಡುಗಡೆ ಅನ್ನೋದೇ ಆಕೆಗೆ ಇಲ್ಲ ಎಂದು ಕೋರ್ಟ್‌ ಹೇಳಿದೆ.

ಲೂಸಿ ಲೆಟ್ಬಿಗೆ ಕ್ರೌನ್‌ ಕೋರ್ಟ್‌ನಲ್ಲಿ ಲಭ್ಯವಿರುವ ಅತ್ಯಂತ ಕಠಿಣ ಶಿಕ್ಷೆಯನ್ನ ವಿಧಿಸಲಾಗಿದೆ. ಆಕೆ ತನ್ನ ಉಳಿದ ಜೀವನವನ್ನು ಜೈಲಿನಲ್ಲಿ ಕಳೆಯುತ್ತಾಳೆ ಎಂದು ಮ್ಯಾಂಚೆಸ್ಟರ್‌ ನ್ಯಾಯಾಧೀಶ ಜೇಮ್ಸ್ ಗಾಸ್ ಹೇಳಿದ್ದಾರೆ.

ಲೂಸಿ ಲೆಟ್ಬಿ ಎಂದು ಗುರುತಿಸಲ್ಪಟ್ಟ ಬ್ರಿಟಿಷ್‌ ನರ್ಸ್ 2015ರ ಜೂನ್ ರಿಂದ 2016ರ ಜೂನ್ ನಡುವೆ ವಾಯವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಸರಣಿ ಕೊಲೆಗಳನ್ನ ಮಾಡಿದ್ದಾಳೆ. ಕಳೆದ ಅಕ್ಟೋಬರ್‌ನಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಕಳೆದ ಶುಕ್ರವಾರ ಈ ಕುರಿತು ವಿಚಾರಣೆ ನಡೆಸಿದ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ ಕೋರ್ಟ್ ಶಿಶುಹತ್ಯೆಯ ಆರೋಪಿ ನರ್ಸ್‌ಗೆ ಶಿಕ್ಷೆ ವಿಧಿಸಲು ಮುಂದಾಗಿತ್ತು. ಈಕೆಗೆ ಶಿಕ್ಷೆ ವಿಧಿಸಲು ಭಾರತೀಯ ಮೂಲದ ಮಕ್ಕಳ ವೈದ್ಯರ ಸಲಹೆಗಾರ ಡಾ. ರವಿ ಜಯರಾಮ್ ಸಹಕರಿಸಿದ್ದರು. ಇದರಿಂದಾಗಿ ಭಾರತೀಯ ಮೂಲದ ವೈದ್ಯನಿಗೆ ಭಾರೀ ಪ್ರಸಂಶೆ ವ್ಯಕ್ತವಾಗಿತ್ತು.

ಚಾಲಾಕಿ ಮಹಿಳೆಯಿಂದ ಕೊಲೆಯಾದ ಹೆಚ್ಚಿನ ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಏಕೆಂದರೆ ಲೂಸಿ ಲೆಟ್ಬಿ (33) ತನ್ನ ಆರೈಕೆಯಲ್ಲಿದ್ದ ಶಿಶುಗಳಿಗೆ ವಿಷಪೂರಿತ ಚುಚ್ಚುಮದ್ದು ನೀಡುತ್ತಿದ್ದಳು. ಜೊತೆಗೆ ಹಾಲಿನೊಂದಿಗೆ ವಿಷಪೂರಿತ ಲಿಕ್ವಿಡ್ ಬೆರಸಿಕೊಡುತ್ತಿದ್ದಳು. ಜೊತೆಗೆ ಮಕ್ಕಳನ್ನ ಉಸಿರುಗಟ್ಟಿಸಿ, ದೈಹಿಕವಾಗಿ ಹಲ್ಲೆ ನಡೆಸಿ ಕೊಂದಿದ್ದಾಳೆ ಎಂದು ಪ್ರಾಸಿಕ್ಯೂಟರ್‌ಗಳು ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್‌ಗೆ ತಿಳಿಸಿದ್ದರು.

ಈ ಹಿಂದೆ ಆಕೆಯ ನಿವಾಸದಲ್ಲಿ ತನಿಖೆ ನಡೆಸಿದಾಗ ಕೆಲ ಪತ್ರಗಳು ಪತ್ತೆಯಾಗಿದ್ದು, ಅದರಲ್ಲಿ ನಾನು ದೆವ್ವ, ಅವಳನ್ನು ನೋಡಿಕೊಳ್ಳಲು ನಾನು ಯೋಗ್ಯವಲ್ಲದ ಕಾರಣ ಉದ್ದೇಶಪೂರ್ವಕವಾಗಿ ಕೊಂದಿದ್ದೇನೆ. ನಾನು ಕೆಟ್ಟವಳು, ಅದಕ್ಕಾಗಿಯೇ ಹಾಗೆ ಮಾಡಿದ್ದೇನೆ ಮತ್ತು ಇಂದು ನಿಮ್ಮ ಜನ್ಮದಿನ ಆದ್ರೆ ನೀವೇ ಇಲ್ಲ, ಅದಕ್ಕಾಗಿ ನಾನು ತುಂಬಾ ವಿಷಾದಿಸುತ್ತೇನೆ ಎಂದು ಬರೆದಿದ್ದ ಪತ್ರಗಳು ಪತ್ತೆಯಾಗಿದ್ದವು.

ಮೊದಲಬಾರಿಗೆ 2015 ರಲ್ಲಿ ನರ್ಸ್ ಕೃತ್ಯ ಬೆಳಕಿಗೆ ಬಂದಿತ್ತು. ಅದೇ ವರ್ಷ ಮೂವರು ಮಕ್ಕಳು ಸಾವನ್ನಪ್ಪಿದ್ದವು. ಕೊನೆಗೆ ಏಪ್ರಿಲ್ 2017 ರಲ್ಲಿ ರಾಷ್ಟ್ರೀಯ ಆರೋಗ್ಯ ಸೇವೆ ಟ್ರಸ್ಟ್, ಪೊಲೀಸರು ವೈದ್ಯರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ನಂತರ ಪ್ರಕರಣದ ತನಿಖೆ ಮುಂದುವರಿಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 2018 ಮತ್ತು ನವೆಂಬರ್ 2020ರ ನಡುವೆ ನರ್ಸ್ ಅನ್ನು ಮೂರು ಬಾರಿ ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು. ಘಟನೆ ಬೆಳಕಿಗೆ ಬಂದ ನಂತರ ಆಕೆಯನ್ನ ದೇಶದ ಅತ್ಯಂತ ಕೆಟ್ಟ ಬೇಬಿ ಸೀರಿಯಲ್ ಕಿಲ್ಲರ್ ಎಂದು ಪರಿಗಣಿಸಲಾಗಿತ್ತು.

lokesh

Recent Posts

ಮೈಸೂರಲ್ಲಿ ನಾಳೆಯಿಂದ ಮಾಗಿ ಉತ್ಸವ

ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ  ಫಲಪುಷ್ಪ ಪ್ರದರ್ಶನ ಒಳಗೊಂಡ…

17 mins ago

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡಿಗರು ವಾಸಿಸುವ ನಾಡು: ಸಿಎಂ ಸಿದ್ದರಾಮಯ್ಯ

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…

22 mins ago

10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು: ಗೊ.ರು.ಚ ಹಕ್ಕೊತ್ತಾಯ

ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…

36 mins ago

ಕಾರು ಪಲ್ಟಿ; ಇಬ್ಬರಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…

49 mins ago

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ…

2 hours ago

ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯವಾಗಿದೆ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು…

2 hours ago