BREAKING NEWS

ಪತ್ನಿ ಅಕ್ಷತಾ ಮೂರ್ತಿಯೊಂದಿಗೆ ಅಕ್ಷರಧಾಮ ದೇವಾಲಯಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭೇಟಿ

ನವದೆಹಲಿ : ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಪತ್ನಿ ಅಕ್ಷತಾ ಮೂರ್ತಿಯವರೊಂದಿಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬ್ರಿಟನ್ ಪ್ರಧಾನಿ ಆದ ಬಳಿಕ ರಿಷಿ ಸುನಾಕ್ ಅವರು ಹಲವು ಬಾರಿ ತಮ್ಮ ಭಾರತೀಯ ಮೂಲದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಒಬ್ಬ ಹೆಮ್ಮೆಯ ಭಾರತೀಯ ಎಂದಿರುವ ರಿಷಿ ಸುನಾಕ್, ನನ್ನ ಪೂರ್ವಜರು ಭಾರತೀಯರು ಎಂದು ಹೇಳಿದ್ದಾರೆ. ಈ ಮೂಲಕ ಭಾರತದ ಜೊತೆಗೆ ಇರುವ ತಮ್ಮ ನಂಟನ್ನು ವಿವರಿಸುತ್ತಾರೆ. ಇದೀಗ ಜಿ – 20 ಶೃಂಗ ಸಭೆಯ ಕಾರ್ಯದೊತ್ತಡದ ನಡುವೆಯೂ ಅಕ್ಷರಧಾಮ ದೇಗುಲಕ್ಕೆ ಭೇಟಿ ನೀಡಿ ತಮ್ಮ ಧಾರ್ಮಿಕ ನಂಬಿಕೆಯನ್ನು ಸಾರಿದ್ದಾರೆ.

ಕಳೆದ ತಿಂಗಳು ತಮ್ಮ ಧಾರ್ಮಿಕ ನಂಬಿಕೆ ಕುರಿತು ಮಾತನಾಡಿದ್ದ ರಿಷಿ ಸುನಾಕ್, ಹಿಂದೂ ಧರ್ಮದ ಆದರ್ಶಗಳು ಹಾಗೂ ತತ್ವಗಳು ನನ್ನ ಜೀವನದ ಹಲವು ಆಯಾಮಗಳಲ್ಲಿ ನೆರವಿಗೆ ಬಂದಿವೆ ಎಂದು ವಿವರಿಸಿದ್ದರು. ಧೈರ್ಯ, ಶಕ್ತಿ ಹಾಗೂ ದೃಢತೆಯನ್ನು ತಂದುಕೊಟ್ಟಿದೆ ಎಂದು ಹೇಳಿದ್ದರು. ಒಂದು ದೇಶದ ನಾಯಕನಾಗಿ ನಾನು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ನೆರವಾಗಿದೆ ಎಂದು ರಿಷಿ ಸುನಾಕ್ ಹೇಳಿದ್ದರು.

ದೇವಾಲಯದಲ್ಲಿ ಪ್ರಾರ್ಥನೆ, ಪೂಜೆ ಸಲ್ಲಿಸಿದ ನಂತರ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.ಸುನಕ್ ಅವರ ಭೇಟಿಯ ಹಿನ್ನೆಲೆಯಲ್ಲಿ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ಎರಡು ದಿನಗಳ ಜಿ 20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಭಾರತಕ್ಕೆ ಬಂದಿದ್ದಾರೆ.ಕಳೆದ ವರ್ಷ ಅಕ್ಟೋಬರ್‍ ನಲ್ಲಿ ಯುಕೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಿಷಿ ಸುನಕ್ ಅವರು ಪ್ರಧಾನಿಯಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ಕುರಿತು ಅಕ್ಷರಧಾಮ ದೇವಾಲಯದ ನಿರ್ದೇಶಕ ಜ್ಯೋತಿಂದ್ರ ದವೆ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿ, ಅವರ ಅನುಭವ ಅಸಾಧಾರಣವಾಗಿತ್ತು. ಅವರು ಬಹಳ ನಂಬಿಕೆಯಿಂದ ಪೂಜೆ ಮತ್ತು ಆರತಿಯನ್ನು ಮಾಡಿದರು. ನಾವು ಅವರಿಗೆ ದೇವಾಲಯವನ್ನು ತೋರಿಸಿದ್ದೇವೆ. ನಂತರ ದೇವಸ್ಥಾನದ ಮಾದರಿಯನ್ನು ಉಡುಗೊರೆಯಾಗಿ ನೀಡಿದೆವು. ಅವರು ಇಲ್ಲಿ ಪ್ರತಿ ನಿಮಿಷವನ್ನು ಆನಂದಿಸಿದರು. ಅವರ ಪತ್ನಿ ಅಕ್ಷತಾ ಮೂರ್ತಿ ಸಹ ಖುಷಿಪಟ್ಟರು ಎಂದರು.

lokesh

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

5 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

5 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

5 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

6 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

6 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

6 hours ago