ನವದೆಹಲಿ: ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು.
ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಾಯಕರ ಸೇರ್ಪಡೆಯಿಂದಾಗಿ ಕಾಂಗ್ರೆಸ್‌ಗೆ ಸ್ವಲ್ಪ ಬಲ ಬದಂತಾಗಿದೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರಕ್ಕೆ ತೀವ್ರ ಸವಾಲ್ ಒಡ್ಡಲು ಮತ್ತು ಅದನ್ನು ಅಧಿಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
We welcome several prominent leaders from Telangana in the Congress party.
The political tide in Telangana is turning for the good and the people of the state want a Congress Govt at the helm for overall progress and prosperity.
The entry of Former Minister, Shri Jupally… pic.twitter.com/pej36Fv7gg
— Mallikarjun Kharge (@kharge) August 3, 2023