Mysore
29
scattered clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಬಿಆರ್ ಎಸ್ ನಾಯಕರು!

ನವದೆಹಲಿ:  ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ಉಸ್ತುವಾರಿ ಮಾಣಿಕ್ರಾವ್ ಠಾಕ್ರೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು.

ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಾಯಕರ ಸೇರ್ಪಡೆಯಿಂದಾಗಿ ಕಾಂಗ್ರೆಸ್‌ಗೆ ಸ್ವಲ್ಪ ಬಲ ಬದಂತಾಗಿದೆ.  ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರಕ್ಕೆ ತೀವ್ರ ಸವಾಲ್ ಒಡ್ಡಲು ಮತ್ತು ಅದನ್ನು ಅಧಿಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ