ಅನಾರೋಗ್ಯದ ಕಾರಣ ರಾಜೀನಾಮೆ ನೀಡಿ: ಪ್ರಧಾನಿಯೊಂದಿಗಿನ ಸಭೆಯಲ್ಲಿ ಯಡಿಯೂರಪ್ಪಗೆ ಸೂಚನೆ- ಮೂಲಗಳು

ಹೊಸದಿಲ್ಲಿ: ಅನಾರೋಗ್ಯದ ಕಾರಣದಿಂದಾಗಿ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪ್ರಧಾನ ಮಂತ್ರಿ ಮೋದಿ ಅವರ ಭೇಟಿ ವೇಳೆ ಸೂಚನೆ ನೀಡಲಾಗಿದೆಯೆಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಯಡಿಯೂರಪ್ಪ ಅವರ ರಾಜೀನಾಮೆಯನ್ನು ಒಪ್ಪಿಕೊಳ್ಳಬೇಕೆ ಎಂಬುದನ್ನು ಬಿಜೆಪಿ ಹೈಕಮಾಂಡ್‌ ನಿರ್ಧರಿಸಲಿದೆ. ಜು.26ಕ್ಕೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಲಿದೆ. ಹೀಗಾಗಿ, ಬಿಎಸ್‌ವೈ ಅವರನ್ನು ಬದಲಿಸಲು ಹೈಕಮಾಂಡ್‌ ನಿರ್ಧರಿಸಿದರೆ, ಜುಲೈ 26ರಂದು ನಾಯಕತ್ವ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಯಡಿಯೂರಪ್ಪ ಅವರ ನಂತರದ ಉತ್ತರಾಧಿಕಾರಿ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರನೊಂದಿಗೆ ಬಿಜೆಪಿ ನಾಯಕರ ಭೇಟಿಗೆ ದೆಹಲಿಗೆ ತೆರಳಿದ್ದರು.

× Chat with us