ಪಂಜಾಬ್ : ಪಂಜಾಬ್‌ನ ತರ್ನ್ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ನಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ತರ್ನ್ ತರನ್ ಜಿಲ್ಲೆಯ ತೆಕಲನ್ ಗ್ರಾಮದ ಐಬಿ ಬಳಿ ಅನುಮಾನಾಸ್ಪದ ವ್ಯಕ್ತಿಯ ಚಲನವಲನವನ್ನು ಗಮನಿಸಿದ ಬಿಎಸ್ಎಫ್ ಪಡೆಗಳು,ಆತನಿಗೆ ಗುಂಡಿಕ್ಕಿ ಸ್ಥಳದಲ್ಲಿಯೇ ಹತ್ಯೆ ಮಾಡಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಜುಲೈನಲ್ಲಿ ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಬಿಎಸ್ ಎಫ್ ಪಡೆಗಳು ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿದ್ದರಿಂದ ಪಾಕಿಸ್ತಾನದ ಒಳನುಸುಳುಕೋರನೊಬ್ಬ ಸಾವನ್ನಪ್ಪಿದ್ದ.
ಅರ್ನಿಯಾ ಸೆಕ್ಟರ್‌ನ ಜಬೋವಾಲ್ ಗಡಿ ಹೊರಠಾಣೆ ಬಳಿ ಗಡಿ ಬಳಿ ಪದೇ ಪದೇ ಮಾಡಲಾದ ಮನವಿಯನ್ನು ನಿರ್ಲಕ್ಷಿಸಿ ಗಡಿ ತಂತಿ ಬೇಲಿ ದಾಟಿ ಪಲಾಯನ ಮಾಡಲು ಪ್ರಯತ್ನಿಸಿದ ನಂತರ ಆತನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಬಿಎಸ್ ಎಫ್ ಮಾಹಿತಿ ನೀಡಿತ್ತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…
ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…