BREAKING NEWS

ಬುದ್ಧನ ಬೋಧನೆಗಳು ಜಾಗತಿಕ ಸಮಸ್ಯೆಗಳಿಗೆ ಪರಿಹಾರ: ಪ್ರಧಾನಿ ಮೋದಿ

ನವದೆಹಲಿ: ಜಗತ್ತು ಎದುರಿಸುತ್ತಿರುವ ಯುದ್ಧ, ಆರ್ಥಿಕ ಅಸ್ಥಿರತೆ, ಭಯೋತ್ಪಾದನೆ, ಅಸಮಾನತೆ ಸೇರಿದಂತೆ ಹವಾಮಾನ ಬದಲಾವಣೆಯಂತಹ ಸವಾಲುಗಳಿಗೆ ಭಗವಾನ್ ಬುದ್ಧನ ಆಲೋಚನೆಗಳು ಪರಿಹಾರ ಒದಗಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಇಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಜನರ ಜತೆಗೆ ರಾಷ್ಟ್ರಗಳು ಸಹ ತಮ್ಮ ಆಸಕ್ತಿಯೊಂದಿಗೆ ಜಾಗತಿಕ ಹಿತಾಸಕ್ತಿಗಳಿಗೆ ಆದ್ಯತೆ ನೀಡುವುದು ಇಂದಿನ ಅಗತ್ಯವಾಗಿದೆ. ಬಡವರು ಹಾಗೂ ಸಂಪನ್ಮೂಲಗಳ ಕೊರತೆ ಹೊಂದಿರುವ ದೇಶಗಳ ಕುರಿತು ಜಗತ್ತು ಯೋಚಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಭಾರತವು ಬುದ್ಧನು ತೋರಿಸಿದ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಮೋದಿ ಪ್ರತಿಪಾದಿಸಿದರು. ಟರ್ಕಿ ಭೂಕಂಪ ನಂತರ ಸಹಾಯಕ್ಕೆ ದಾವಿಸಿದ್ದನ್ನು ಉಲ್ಲೇಖಿಸಿ, ಪ್ರತಿಯೊಬ್ಬ ಮನುಷ್ಯನ ನೋವನ್ನು ತನ್ನದೇ ಎಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.

ಗುಜರಾತ್‌ನಲ್ಲಿರುವ ಮೋದಿ ಜನ್ಮಸ್ಥಳ ಮತ್ತು ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಬುದ್ಧನ ವಿಚಾರಗಳನ್ನು ಪ್ರಚಾರ ಮಾಡಲು ಅಲ್ಲಿನ ಸರ್ಕಾರ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.

ಏಪ್ರಿಲ್ 20 ಮತ್ತು 21 ರಂದು ಅಂತರರಾಷ್ಟ್ರೀಯ ಬೌದ್ಧ ಒಕ್ಕೂಟದ ಸಹಯೋಗದೊಂದಿಗೆ ಸಂಸ್ಕೃತಿ ಸಚಿವಾಲಯವು ಶೃಂಗಸಭೆಯನ್ನು ಆಯೋಜಿಸಿದೆ.

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

3 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

4 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

5 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

6 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

7 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

7 hours ago