ಕಲಬುರಗಿ: ರಾಜ್ಯ ಸರ್ಕಾರದ ಬಜೆಟ್ ಅನುದಾನ ಹಾಗೂ ಆದಾಯ ನೋಡಿಕೊಂಡೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ಏನಾದರೂ ಹೇಳ್ತಾ ಹೋಗಲಿ ಆದರೆ ತಾವು ಮಾಡಿ ತೋರಿಸುತ್ತೇವೆ. ಇದಕ್ಕೆ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ್ದ ಆಶಾಶ್ವನೆಗಳನ್ನು ಸಾಕಾರಗೊಳಿಸಿದ್ದೇ ಸಾಕ್ಷಿ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋದಿ ಕೊಡುಗೆ ಏನು?: ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋದಿ ಏನು ಕೊಡುಗೆ ನೀಡಿದ್ದಾರೆ. ಇದ್ದ ಯೋಜನೆಗಳು ಬೇರೆ ಕಡೆ ಹೋಗಿವೆ. ನಾವು ಮಂಜೂರು ಮಾಡಿದ್ದ ರೈಲುಗಳಿಗೆ ಬಣ್ಣ ಬಳೆದು ಹೊಸ ರೈಲು ಬಿಟ್ಟಿದ್ದಾರೆ. ಕೆಲವರಿಗೆ ಪ್ರಚಾರಬೇಕು. ಪ್ರಚಾರದಿಂದಲೇ ಎಲ್ಲ ಸಿಗುತ್ತೇ ಅಂದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ತಿಳಿಯುತ್ತದೆ ಎಂದರು.
ಚುನಾವಣೆ ವಾರ್ ಇದ್ದಂತೆ, ಅವರು ಹಂಗ್ ಅಂದ್ರು, ಇವರು ಹಿಂಗ್ ಅಂದ್ರು ಅಂತ ಅಳುತ್ತಾ ಕೂತ್ಕುಕೊಳ್ಳದಲ್ಲ. ಮುಂಜಾನೆಯಿಂದ ಸಂಜೆವರೆಗೆ ಅಳುತ್ತಾ ಕೂರೋದು ಪ್ರಧಾನಿ ಕೆಲಸನಾ? ಎಂದು ಖರ್ಗೆ ಖಾರವಾಗಿ ಪ್ರಶ್ನಿಸಿದರು.
ಜನ ಭಾವನಾತ್ಮಕ ಬಲಿ ಬಿದ್ರೆ ಯಾವ ರಾಜ್ಯವು ಅಭಿವೃದ್ಧಿಯಾಗಲ್ಲ. ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನೇ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ. ಜನ ಅರಿತುಕೊಳ್ಳುವುದು ಮುಖ್ಯವಾಗಿದೆ ಎಂದು ಖರ್ಗೆ ಹೇಳಿದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…