BREAKING NEWS

ಬಜೆಟ್ ಅನುದಾನ, ಆದಾಯ ನೋಡಿಯೇ ಗ್ಯಾರಂಟಿ ಯೋಜನೆ: ಖರ್ಗೆ

ಕಲಬುರಗಿ: ರಾಜ್ಯ ಸರ್ಕಾರದ ಬಜೆಟ್ ಅನುದಾನ ಹಾಗೂ ಆದಾಯ ನೋಡಿಕೊಂಡೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳ ಬಗ್ಗೆ ಏನಾದರೂ ಹೇಳ್ತಾ ಹೋಗಲಿ  ಆದರೆ ತಾವು ಮಾಡಿ ತೋರಿಸುತ್ತೇವೆ. ಇದಕ್ಕೆ ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೀಡಿದ್ದ ಆಶಾಶ್ವನೆಗಳನ್ನು ಸಾಕಾರಗೊಳಿಸಿದ್ದೇ ಸಾಕ್ಷಿ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋದಿ ಕೊಡುಗೆ ಏನು?: ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋದಿ ಏನು ಕೊಡುಗೆ ನೀಡಿದ್ದಾರೆ. ಇದ್ದ ಯೋಜನೆಗಳು ಬೇರೆ ಕಡೆ ಹೋಗಿವೆ. ನಾವು ಮಂಜೂರು ಮಾಡಿದ್ದ ರೈಲುಗಳಿಗೆ ಬಣ್ಣ ಬಳೆದು ಹೊಸ ರೈಲು ಬಿಟ್ಟಿದ್ದಾರೆ. ಕೆಲವರಿಗೆ ಪ್ರಚಾರಬೇಕು. ಪ್ರಚಾರದಿಂದಲೇ ಎಲ್ಲ ಸಿಗುತ್ತೇ ಅಂದುಕೊಂಡಿದ್ದಾರೆ.‌ ಮುಂದಿನ ದಿನಗಳಲ್ಲಿ ಎಲ್ಲವೂ ತಿಳಿಯುತ್ತದೆ ಎಂದರು.

ಚುನಾವಣೆ ವಾರ್ ಇದ್ದಂತೆ, ಅವರು ಹಂಗ್ ಅಂದ್ರು, ಇವರು ಹಿಂಗ್ ಅಂದ್ರು ಅಂತ ಅಳುತ್ತಾ ಕೂತ್ಕುಕೊಳ್ಳದಲ್ಲ. ಮುಂಜಾನೆಯಿಂದ ಸಂಜೆವರೆಗೆ ಅಳುತ್ತಾ ಕೂರೋದು ಪ್ರಧಾನಿ ಕೆಲಸನಾ? ಎಂದು ಖರ್ಗೆ ಖಾರವಾಗಿ ಪ್ರಶ್ನಿಸಿದರು.

ಜನ ಭಾವನಾತ್ಮಕ ಬಲಿ ಬಿದ್ರೆ ಯಾವ ರಾಜ್ಯವು ಅಭಿವೃದ್ಧಿಯಾಗಲ್ಲ. ಬಿಜೆಪಿಯವರು ಭಾವನಾತ್ಮಕ ವಿಚಾರಗಳನ್ನೇ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ. ಜನ ಅರಿತುಕೊಳ್ಳುವುದು ಮುಖ್ಯವಾಗಿದೆ ಎಂದು ಖರ್ಗೆ ಹೇಳಿದರು.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago