BREAKING NEWS

ಅಮರನಾಥ ಯಾತ್ರೆ ಮುಗಿಸಿ ತೆರಾಳುತ್ತಿದ್ದ ಬಸ್ ಅಪಘಾತ : ಐವರ ಧಾರುಣ ಸಾವು

ಮುಂಬೈ : ಅಮರನಾಥ ಯಾತ್ರೆ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದು, 20 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದಿದೆ.

ಮಲ್ಕಾಪುರ ಪ್ರದೇಶದ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ಎನ್‍ಎಚ್ 53 ತಡರಾತ್ರಿ 2:30ರ ಸುಮಾರಿಗೆ ಎರಡು ಬಸ್‍ಗಳ ಡಿಕ್ಕಿಯಾಗಿದೆ. ಇದರಿಂದಾಗಿ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದು ಬಸ್‍ನಲ್ಲಿ ಅಮರನಾಥ ಯಾತ್ರೆ ಮುಗಿಸಿ ಪ್ರಯಾಣಿಕರು ಹಿಂಗೋಲಿ ಜಿಲ್ಲೆಗೆ ಮರಳುತ್ತಿದ್ದರು. ಇನ್ನೊಂದು ಬಸ್ ನಾಸಿಕ್ ಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡಿರುವ ಸುಮಾರು 20 ಮಂದಿಯನ್ನು ಬುಲ್ಧಾನಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ರಸ್ತೆ ಕೆಲವು ಗಂಟೆಗಳ ಕಾಲ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಬಳಿಕ ಪೊಲೀಸರು ಬಸ್‍ಗಳನ್ನು ತೆರವುಗೊಳಿಸಿದ ನಂತರ ಸಂಚಾರಕ್ಕೆ ಅವಕಾಶ ನೀಡಲಾಯಿತು.

ಇತ್ತೀಚಿಗೆ ಬುಲ್ಧಾನಾ ಜಿಲ್ಲೆಯಲ್ಲಿ ನಡೆದ ಎರಡನೇ ದೊಡ್ಡ ಬಸ್ ಅಪಘಾತ ಇದಾಗಿದೆ. ಜು.1 ರಂದು ಜಿಲ್ಲೆಯ ಸಮೃದ್ಧಿ-ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ಅಪಘಾತದ ಬಳಿಕ ಬಸ್‍ಗೆ ಬೆಂಕಿ ಹೊತ್ತಿಕೊಂಡಿತ್ತು. ಇದರಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 25 ಜನರು ಸುಟ್ಟು ಹೋಗಿದ್ದರು. ಅಲ್ಲದೇ 8 ಜನರು ಗಾಯಗೊಂಡಿದ್ದರು.

lokesh

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

2 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

2 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

2 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

2 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

2 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

2 hours ago