ಬಿಲಾಸ್‌ಪುರ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಯಪುರದ ರ್‍ಯಾಲಿಗೆ ಜನರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಸುಮಾರು 40 ಜನರಿದ್ದ ಬಸ್ ಅಂಬಿಕಾಪುರದಿಂದ ರಾಯಪುರಕ್ಕೆ ತೆರಳುತ್ತಿದ್ದಾಗ ಬೆಲ್ಟಾರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾರೀ ಮಳೆಯಿಂದಾಗಿ ರಸ್ತೆಬದಿಯಲ್ಲಿ ನಿಂತಿದ್ದ ಟ್ರಕ್, ಬಸ್ ಚಾಲಕನಿಗೆ ಸ್ಪಷ್ಟವಾಗಿ ಗೋಚರಿಸದ ಕಾರಣ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ಮೃತರನ್ನು ಸೂರಜ್‌ಪುರ ಜಿಲ್ಲೆಯ ಸಜನ್ (30), ರುಕ್‌ದೇವ್ (45) ಮತ್ತು ಬಸ್ ಚಾಲಕ ಬಲರಾಮ್‌ಪುರ ಜಿಲ್ಲೆಯ ನಿವಾಸಿ ಅಕ್ರಂ ರಾಜಾ (28) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸೂರಜ್‌ಪುರದ ಬಿಜೆಪಿಯ ಲಾಟೋರಿ ಘಟಕದ ಮಂಡಲ ಅಧ್ಯಕ್ಷ ಲಿಲು ಗುಪ್ತಾ ಮತ್ತು ಸೂರಜ್‌ಪುರದ ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿ ವಿಶಂಭರ್ ಯಾದವ್ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬಿಲಾಸ್‌ಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ಈ ನಡುವೆ ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತಪಟ್ಟವರ ಪ್ರತಿ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…