ನೇಪಾಳ : ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 15ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಕಠ್ಮಂಡುವಿನಿಂದ ಬೇನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.
ಕಠ್ಮಂಡುವಿನಿಂದ ರಮಣೀಯ ನಗರವಾದ ಪೊಖರಾಗೆ ತೆರಳುತ್ತಿದ್ದ ಬಸ್ ಪ್ರಾಂತದ ಧಾಡಿಂಗ್ ಜಿಲ್ಲೆಯ ಚಾಲೀಸ್‌ನಲ್ಲಿ ತ್ರಿಶೂಲಿ ನದಿಗೆ ಬಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತದ ನಂತರ ಬಸ್ ತ್ರಿಶೂಲಿ ನದಿಯಲ್ಲಿ ಭಾಗಶಃ ಮುಳುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೆಯೇ ಅನೇಕ ಪ್ರಯಾಣಿಕರನ್ನು ಬಸ್ನಿಂದ ಜೀವಂತವಾಗಿ ಹೊರತೆಗೆಯಲಾಯಿತು. ಮುಂಗಾರಿನಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚಿತ್ತು.
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…
ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ…