ಡೆಹ್ರಾಡೂನ್ : ಹರಿಯಾಣದಿಂದ ಬರುತ್ತಿದ್ದ ಬಸ್ ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 26 ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಸಿವಿಲ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ನೈನಿತಾಲ್‌ನ ವಿಪತ್ತು ನಿಯಂತ್ರಣಾ ಕೊಠಡಿ ಭಾನುವಾರ 30 ರಿಂದ 33 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಾಲಾಧುಂಗಿ ರಸ್ತೆಯ ನಲ್ನಿಯಲ್ಲಿ ಕಂದಕಕ್ಕೆ ಉರುಳಿದೆ ಎಂದು ಎಸ್‌ಡಿಆರ್‌ಎಫ್‌ಗೆ ಮಾಹಿತಿ ನೀಡಿದೆ. ಈ ಮಾಹಿತಿಯ ಮೇರೆಗೆ ಕಮಾಂಡೆಂಟ್ ಎಸ್‌ಡಿಆರ್‌ಎಫ್ ಮಣಿಕಾಂತ್ ಮಿಶ್ರಾ ಅವರ ಸೂಚನೆಯಂತೆ ಪೋಸ್ಟ್ ರುದ್ರಪುರ, ನೈನಿತಾಲ್ ಮತ್ತು ಖೈರ್ನಾದಿಂದ ಎಸ್‌ಡಿಆರ್‌ಎಫ್ ರಕ್ಷಣಾ ತಂಡಗಳು ರಕ್ಷಣೆಗಾಗಿ ಸ್ಥಳಕ್ಕೆ ತೆರಳಿದೆ.
ಬಸ್ ನಿಯಂತ್ರಣ ತಪ್ಪಿ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಸ್‌ಡಿಆರ್‌ಎಫ್ ರಕ್ಷಣಾ ತಂಡವು ಸ್ಥಳಕ್ಕೆ ಆಗಮಿಸಿ ಎನ್‌ಡಿಆರ್‌ಎಫ್, ಸ್ಥಳೀಯ ಪೊಲೀಸರು ಮತ್ತು ಇತರ ರಕ್ಷಣಾ ಘಟಕಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಬಸ್ಸಿನಲ್ಲಿದ್ದ 26 ಮಂದಿ ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…