BREAKING NEWS

ಕಂದಕಕ್ಕೆ ಉರುಳಿದ ಬಸ್ : 7 ಮಂದಿ ದುರ್ಮರಣ

ಡೆಹ್ರಾಡೂನ್ : ಹರಿಯಾಣದಿಂದ ಬರುತ್ತಿದ್ದ ಬಸ್ ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ಪರಿಣಾಮ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 26 ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಸಿವಿಲ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ನೈನಿತಾಲ್‌ನ ವಿಪತ್ತು ನಿಯಂತ್ರಣಾ ಕೊಠಡಿ ಭಾನುವಾರ 30 ರಿಂದ 33 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಾಲಾಧುಂಗಿ ರಸ್ತೆಯ ನಲ್ನಿಯಲ್ಲಿ ಕಂದಕಕ್ಕೆ ಉರುಳಿದೆ ಎಂದು ಎಸ್‌ಡಿಆರ್‌ಎಫ್‌ಗೆ ಮಾಹಿತಿ ನೀಡಿದೆ. ಈ ಮಾಹಿತಿಯ ಮೇರೆಗೆ ಕಮಾಂಡೆಂಟ್ ಎಸ್‌ಡಿಆರ್‌ಎಫ್ ಮಣಿಕಾಂತ್ ಮಿಶ್ರಾ ಅವರ ಸೂಚನೆಯಂತೆ ಪೋಸ್ಟ್ ರುದ್ರಪುರ, ನೈನಿತಾಲ್ ಮತ್ತು ಖೈರ್ನಾದಿಂದ ಎಸ್‌ಡಿಆರ್‌ಎಫ್ ರಕ್ಷಣಾ ತಂಡಗಳು ರಕ್ಷಣೆಗಾಗಿ ಸ್ಥಳಕ್ಕೆ ತೆರಳಿದೆ.

ಬಸ್ ನಿಯಂತ್ರಣ ತಪ್ಪಿ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಸ್‌ಡಿಆರ್‌ಎಫ್ ರಕ್ಷಣಾ ತಂಡವು ಸ್ಥಳಕ್ಕೆ ಆಗಮಿಸಿ ಎನ್‌ಡಿಆರ್‌ಎಫ್, ಸ್ಥಳೀಯ ಪೊಲೀಸರು ಮತ್ತು ಇತರ ರಕ್ಷಣಾ ಘಟಕಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಬಸ್ಸಿನಲ್ಲಿದ್ದ 26 ಮಂದಿ ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

16 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

17 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

18 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

18 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

24 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

24 hours ago