ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ.
ಶಿವಪ್ಪ ಅವರು ತಮ್ಮ ಸ್ಕೂಟರ್ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿತ್ತು.
ಆದರೆ ನೆನ್ನೆ ರಾತ್ರಿ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವಿಗೀಡಾಗಿದ್ದಾರೆ.
ಮೃತರು ಪತ್ನಿ, ಪುತ್ರ ಸೇರಿದಂತೆ ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ್ದಾರೆ, ಇವರ ಅಂತ್ಯಕ್ರಿಯೆಯು ಸ್ವಗ್ರಾಮ ದರಸಗುಪ್ಪೆಯಲ್ಲಿ ನಡೆಯಲಿದೆ.
ಶಿವಪ್ಪ ಅವರು ಕಳೆದ 30 ವರ್ಷಗಳಿಂದ ತಮ್ಮ ಮನೆಯ ಪಕ್ಕದಲ್ಲೇ ಹೋಟೆಲ್ ನಡೆಸುತ್ತಿದ್ದರು. ಆರು ಇಡ್ಲಿ, ಬೆಣ್ಣೆ ಮತ್ತು ಚಟ್ನಿ ಒಳಗೊಂಡಿರುವ ಪ್ರತಿ ಪ್ಲೇಟ್‌ಗೆ ₹ 40 ಪಡೆದುಕೊಳ್ಳುತ್ತಿದ್ದರು. ರಾಮನಗರ ಮೂಲದವರಾದ ಶಿವಪ್ಪ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ದರಸಗುಪ್ಪೆ ಗ್ರಾಮದಲ್ಲಿ ನೆಲೆಸಿದ್ದ ಇವರು ಚಾಮರಾಜನಗರ ಬೀದರ್ ರಾಷ್ಟ್ರೀಯ ಹೆದ್ದಾರಿ ಬಾಜುವಿನಲ್ಲಿದ್ದ ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಸಣ್ಣ ಟೀ ಅಂಗಡಿ ಪ್ರಾರಂಭಿಸಿದರು. ಶುಚಿ ಮತ್ತು ರುಚಿಗೆ ಖ್ಯಾತರಾಗಿದ್ದ ಶಿವಪ್ಪ ಅವರ ಹೋಟೆಲ್‍ನಲ್ಲಿ ಟೀ ಕುಡಿಯಲು ಜನ ತಂಡ ತಂಡವಾಗಿ ಆಗಮಿಸುತ್ತಿದ್ದರು. ನಂತರ ಸಣ್ಣದಾಗಿ ಬೆಳಗಿನ ಉಪಹಾರ ಇಡ್ಲಿ ಮಾರಲು ಪ್ರಾರಂಭಿಸಿದರು. ನೋಡ ನೋಡುತ್ತಿದ್ದಂತೆಯೇ ಅವರ ಇಡ್ಲಿ ಬೆಣ್ಣೆ ಇಡ್ಲಿ ಎಂದೇ ಜನಪ್ರಿಯವಾಯಿತು. ಇವರು ಮಾಡುವ ಇಡ್ಲಿಗೆ ಜನರು ಗಂಟೆ ಗಟ್ಟಲೇ ಕಾಯುವಂತಾಗಿತ್ತು.
ಶ್ರೀರಂಗಪಟ್ಟಣ-ಬೀದರ್ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಪುಟ್ಟ ಹೋಟೆಲ್ ದಕ್ಷಿಣ ಭಾರತದಲ್ಲಿ ಹೆಸರು ವಾಸಿಯಾಗಿತ್ತು. ಹೋಟೆಲ್‍ಗೆ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ಪ್ರವಾಸಿಗರು ಇಡ್ಲಿ ತಿನ್ನಲು ಆಗಮಿಸುತ್ತಿದ್ದರು. ನಟರಾದ ಪ್ರಕಾಶ್ ರೈ ಹಾಗೂ ಸಿಹಿಕಹಿ ಚಂದ್ರು ಅವರು ತಮ್ಮ ಕಾರ್ಯಕ್ರಮಕ್ಕಾಗಿ ಆಗಮಿಸಿ ಇವರ ಇಡ್ಲಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಪುಟ್ಟ ಹೋಟೆಲ್, ಮೈಸೂರುಸಿಟಿಯಿಂದ ಕೇವಲ 30ಕಿಮೀ ದೂರದಲ್ಲಿದೆ.
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…
ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…
ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…
ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…
ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…