BREAKING NEWS

ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ ಬೆಣ್ಣೆ ಇಡ್ಲಿ ಖ್ಯಾತಿಯ ಶಿವಪ್ಪ

ಮಂಡ್ಯ : ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಗ್ರಾಮದ ಬೆಣ್ಣೆ ಇಡ್ಲಿಗೆ ಖ್ಯಾತಿಯಾಗಿದ್ದ ಶಿವಪ್ಪ ಅವರು ಇಂದು ನಿಧನರಾಗಿದ್ದಾರೆ.


ಶಿವಪ್ಪ ಅವರು ತಮ್ಮ ಸ್ಕೂಟರ್‌ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್‌ ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು.ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕರೆತರಲಾಗಿತ್ತು.
ಆದರೆ ನೆನ್ನೆ ರಾತ್ರಿ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆ  ಸಾವಿಗೀಡಾಗಿದ್ದಾರೆ.
ಮೃತರು ಪತ್ನಿ, ಪುತ್ರ ಸೇರಿದಂತೆ ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ್ದಾರೆ, ಇವರ ಅಂತ್ಯಕ್ರಿಯೆಯು ಸ್ವಗ್ರಾಮ ದರಸಗುಪ್ಪೆಯಲ್ಲಿ ನಡೆಯಲಿದೆ.
ಶಿವಪ್ಪ ಅವರು ಕಳೆದ 30 ವರ್ಷಗಳಿಂದ ತಮ್ಮ ಮನೆಯ ಪಕ್ಕದಲ್ಲೇ ಹೋಟೆಲ್ ನಡೆಸುತ್ತಿದ್ದರು.  ಆರು ಇಡ್ಲಿ, ಬೆಣ್ಣೆ ಮತ್ತು ಚಟ್ನಿ ಒಳಗೊಂಡಿರುವ ಪ್ರತಿ ಪ್ಲೇಟ್‌ಗೆ ₹ 40 ಪಡೆದುಕೊಳ್ಳುತ್ತಿದ್ದರು. ರಾಮನಗರ ಮೂಲದವರಾದ ಶಿವಪ್ಪ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ದರಸಗುಪ್ಪೆ ಗ್ರಾಮದಲ್ಲಿ ನೆಲೆಸಿದ್ದ ಇವರು ಚಾಮರಾಜನಗರ ಬೀದರ್ ರಾಷ್ಟ್ರೀಯ ಹೆದ್ದಾರಿ ಬಾಜುವಿನಲ್ಲಿದ್ದ ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಸಣ್ಣ ಟೀ ಅಂಗಡಿ ಪ್ರಾರಂಭಿಸಿದರು. ಶುಚಿ ಮತ್ತು ರುಚಿಗೆ ಖ್ಯಾತರಾಗಿದ್ದ ಶಿವಪ್ಪ ಅವರ ಹೋಟೆಲ್‍ನಲ್ಲಿ ಟೀ ಕುಡಿಯಲು ಜನ ತಂಡ ತಂಡವಾಗಿ ಆಗಮಿಸುತ್ತಿದ್ದರು. ನಂತರ ಸಣ್ಣದಾಗಿ ಬೆಳಗಿನ ಉಪಹಾರ ಇಡ್ಲಿ ಮಾರಲು ಪ್ರಾರಂಭಿಸಿದರು. ನೋಡ ನೋಡುತ್ತಿದ್ದಂತೆಯೇ ಅವರ ಇಡ್ಲಿ ಬೆಣ್ಣೆ ಇಡ್ಲಿ ಎಂದೇ ಜನಪ್ರಿಯವಾಯಿತು. ಇವರು ಮಾಡುವ ಇಡ್ಲಿಗೆ ಜನರು ಗಂಟೆ ಗಟ್ಟಲೇ ಕಾಯುವಂತಾಗಿತ್ತು.

ಶ್ರೀರಂಗಪಟ್ಟಣ-ಬೀದರ್ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಪುಟ್ಟ ಹೋಟೆಲ್ ದಕ್ಷಿಣ ಭಾರತದಲ್ಲಿ ಹೆಸರು ವಾಸಿಯಾಗಿತ್ತು. ಹೋಟೆಲ್‍ಗೆ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ಪ್ರವಾಸಿಗರು ಇಡ್ಲಿ ತಿನ್ನಲು ಆಗಮಿಸುತ್ತಿದ್ದರು. ನಟರಾದ ಪ್ರಕಾಶ್ ರೈ ಹಾಗೂ ಸಿಹಿಕಹಿ ಚಂದ್ರು ಅವರು ತಮ್ಮ ಕಾರ್ಯಕ್ರಮಕ್ಕಾಗಿ ಆಗಮಿಸಿ ಇವರ ಇಡ್ಲಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಪುಟ್ಟ ಹೋಟೆಲ್, ಮೈಸೂರುಸಿಟಿಯಿಂದ ಕೇವಲ 30ಕಿಮೀ ದೂರದಲ್ಲಿದೆ.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago