ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ 5ನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ನೋಂದಣಿಗೆ ಸಾಲನೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಗೆ ಸವಾಲ್ ಹಾಕಿದ್ದಾರೆ.
ನಾವು ನುಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಕೊಟ್ಟು, ವಚನ ಪಾಲನೆ ಮಾಡಿದ್ದೇವೆ. ಮಿಸ್ಟರ್ ನರೇಂದ್ರ ಮೋದಿ ಅವರೇ, ವರ್ಷಕ್ಕೆ 2 ಕೋಟಿಯಂತೆ ನಿಮ್ಮ ಸರ್ಕಾರ ಹತ್ತು ವರ್ಷಕ್ಕೆ 20 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಎಷ್ಟು ಉದ್ಯೋಗ ಸೃಷ್ಟಿಯಾಗಿದೆ ಎಂದು ದೇಶದ ಜನರಿಗೆ ಲೆಕ್ಕ ಕೊಡಿ ಎಂದು ಪ್ರಶ್ನಿಸಿದ್ದಾರೆ.
ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದೊಂದಿಗೆ ರೂಪಿಸಿರುವ ಯೋಜನೆಯೇ ಯುವನಿಧಿ.